BSY ತಿರಸ್ಕರಿಸಿದ್ರು ಬೊಮ್ಮಾಯಿ ಆಫರ್, ಯಾರಾಗ್ತಾರೆ ಬಿಗ್‌ಬಾಸ್ ವಿನ್ನರ್? ಆ.8ರ ಟಾಪ್ 10 ಸುದ್ದಿ!

By Suvarna NewsFirst Published Aug 8, 2021, 5:02 PM IST
Highlights

ಬಸವರಾಜ ಬೊಮ್ಮಾಯಿ ಸರ್ಕಾರ ನೀಡಿದ ಕ್ಯಾಬಿನೆಟ್ ಸ್ಥಾನವನ್ನು ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ನಾನು ಜನತಾದಳದ ಸಿಎಂ ಅಲ್ಲ, ಅಪ್ಪಟ ಬಿಜೆಪಿ ಸಿಎಂ ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಗ್ ಬಾಸ್‌ ವಿಜೇತರು ಪಡೆಯುವ ಮೊತ್ತದಲ್ಲಿ ಬದಲಾವಣೆ ಮಾಡಲಾಗಿದೆ. ನೀರಜ್‌ಗೆ ಮಹೀಂದ್ರಾದಿಂದ XUV 700 ಗಿಫ್ಟ್, 2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ ಸೇರಿದಂತೆ ಆಗಸ್ಟ್ 8ರ ಟಾಪ್ 10 ಸುದ್ದಿ ಇಲ್ಲಿವೆ.

ಬೊಮ್ಮಾಯಿ ಸರ್ಕಾರ ನೀಡಿದ್ದ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ

ಬಸವರಾಜ ಬೊಮ್ಮಾಯಿ ಸರ್ಕಾರ ನೀಡಿದ ಸ್ಥಾನಮಾನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.'

ಅಫ್ಘಾನ್ ಸೇನೆಯಿಂದ ಏರ್‌ಸ್ಟ್ರೈಕ್, 200ಕ್ಕೂ ಅಧಿಕ ತಾಲಿಬಾನಿಯರು ಹತ!

ಅಫ್ಘಾನ್ ವಾಯುಪಡೆಯು ಶೆಬರ್‌ಜೆನ್ ನಗರದಲ್ಲಿ ಏರ್‌ಸ್ಟ್ರೈಕ್ ನಡೆಸಿ ತಾಲಿಬಾನ್ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಿಂದ ತಾಲಿಬಾನಿಯರಿಗೆ ಅಪಾಯ ಹಾನಿಯುಂಟಾಗಿದೆ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

'ನಾನು ಜನತಾದಳದ ಸಿಎಂ ಅಲ್ಲ, ಅಪ್ಪಟ ಬಿಜೆಪಿ ಸಿಎಂ '

ನಮ್ಮದು ಜನತಾ ಪರಿವಾರದ ಸರ್ಕಾರ, ನಾನು ಜನತಾದಳದ ಸಿಎಂ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಅಸಂಬದ್ಧ. ಇಂತಹ ಹೇಳಿಕೆಗೆ ಯಾವುದೇ ಮಹತ್ವ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಶಂಕಿತ ಉಗ್ರರ ಹೆಡೆಮುರಿ ಕಟ್ಟಲು ಎನ್‌ಐಎ ಮಿಂಚಿನ ಕಾರ್ಯಾಚರಣೆ ಹೀಗಿತ್ತು

ಸಿರಿಯಾ ಮೂಲದ ಐಸಿಸ್‌ ಹಾಗೂ ಉಗ್ರ ಸಂಘಟನೆಗಳ ಸಂಬಂಧವಿರುವವರ ಜತೆ ನಂಟಿರುವ ಶಂಕೆಯ ಮೇರೆಗೆ ರಾಷ್ಟ್ರೀಯ ತನಿಖಾ ದಳ ಸ್ಥಳೀಯ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. 

ಬಿಗ್ ಬಾಸ್‌ ವಿಜೇತರು ಪಡೆಯುವ ಮೊತ್ತದಲ್ಲಿ ಬದಲಾವಣೆ; ಟಾಪ್‌ 5ಗೂ ಸಿಗಲಿದೆ ಹಣ!

ಪ್ರತಿ ಬಾರಿಯೂ ಬಿಬಿ ವಿಜೇತರಿಗೆ 50 ಲಕ್ಷ ರೂ. ಪಡೆಯುತ್ತಾರೆ ಆದರೆ ಈ ಬಾರಿ ಟಾಪ್‌ 5 ಸ್ಪರ್ಧಿಳಿಗೆ ಹಣ ಸಿಗುತ್ತದೆ ಹಾಗೂ ಮೊತ್ತದಲ್ಲಿ ಬದಲಾವಣೆ ಆಗಿದೆ. 
 
ಕಡೆಗೂ ಮೆತ್ತಗಾದ ಟ್ವೀಟರ್‌:ಕಾಯಂ ಅಧಿಕಾರಿಗಳ ನೇಮಕ!

ಸುಳ್ಳು ಸುದ್ದಿ ಪ್ರಸಾರ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದೆ ಉದ್ಧಟತನ ಮೆರೆದಿದ್ದ ಜಗತ್ಪ್ರಸಿದ್ಧ ಸಾಮಾಜಿಕ ಜಾಲತಾಣ ಟ್ವೀಟರ್‌ ಈಗ ಮೆತ್ತಗಾಗಿದೆ. ಕೇಂದ್ರ ಸರ್ಕಾರದ ಚಾಟಿ ಹಾಗೂ ದೆಹಲಿ ಹೈಕೋರ್ಟ್‌ ತಪರಾಕಿಗಳ ಬಳಿಕ ಐಟಿ ನಿಯಮಗಳ ರೀತ್ಯ ಮೂವರು ಕಾಯಂ ಅಧಿಕಾರಿಗಳನ್ನು ನೇಮಕ ಮಾಡಿರುವುದಾಗಿ ತಿಳಿಸಿದೆ.

ಆರ್‌ಬಿಐ ಮಹತ್ವದ ನಿರ್ಧಾರ: ಬ್ಯಾಂಕ್‌ ಗ್ರಾಹಕರಿಗೆ ಕಹಿ ಸುದ್ದಿ!

ಕೋವಿಡ್‌ನಿಂದಾಗಿ ದೇಶದ ಆರ್ಥಿಕತೆಗೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಬಡ್ಡಿ ದರಗಳನ್ನು ಪರಿಷ್ಕರಿಸದೆ ಇರಲು ಭಾರತೀಯ ರಿಸವ್‌ರ್‍ ಬ್ಯಾಂಕ್‌ (ಆರ್‌ಬಿಐ) ನಿರ್ಧರಿಸಿದೆ. ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಆರ್‌ಬಿಐ ಶುಕ್ರವಾರ ಬಿಡುಗಡೆ ಮಾಡಿದ್ದು, ಐತಿಹಾಸಿಕ ಕನಿಷ್ಠ ಮಟ್ಟದಲ್ಲಿರುವ ಬಡ್ಡಿ ದರಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಪ್ರಕಟಿಸಿದೆ.

ಚಿನ್ನ ಗೆದ್ದ ನೀರಜ್‌ಗೆ ಮಹೀಂದ್ರಾದಿಂದ XUV 700 ಗಿಫ್ಟ್!

ಟೋಕಿಯೋ ಒಲಿಂಪಿಕ್ಸ್‌ನಲ್ಲಿ  ಭಾರತಕ್ಕೆ ಚಿನ್ನ ತೊಡಿಸಿದ  ಜಾವಲಿನ್‌ ಪಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಇಡೀ ದೇಶವೇ ಕ್ರೀಡಾಪಟುವನ್ನು ಕೊಂಡಾಡುತ್ತಿದೆ. ಭಾರತೀಯ ಸೇನೆಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ಚೋಪ್ರಾ ಸಾಧನೆಯನ್ನು ಇಡೀ ದೇಶವೇ ಮೆಚ್ಚಿದೆ.

click me!