
ಪಂಜಾಬ್ ಸಿಎಂ ರಾಜೀನಾಮೆ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ತಲ್ಲಣ; ಗೆಹ್ಲೋಟ್ ಆಪ್ತನ ತಲೆದಂಡ!
ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ಅಸಮಾಧಾನಗೊಂಡಿರುವ ಅಮರಿಂದರ್ ರಾಜೀನಾಮೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಈ ಬೆಳವಣೆಗೆ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್‌ನಲ್ಲೂ ತಲ್ಲಣ ಶುರುವಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪೆಷಲ್ ಡ್ಯೂಟಿ ಆಫೀಸರ್ ಲೋಕೇಶ್ ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ.
ಸೋನಿಯಾ ಸಮ್ಮತಿ ಇದ್ರೂ ಸಿಎಂ ಹುದ್ದೆ ನಿರಾಕರಿಸಿದ ಅಂಬಿಕಾ ಸೋನಿ, ಕಾರಣವೇನು?
ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಪಂಜಾಬ್‌ನ ಮುಖ್ಯಮಂತ್ರಿ ಯಾರು ಎಂಬುವುದು ಭಾರೀ ಕುತೂಹಲ ಮೂಡಿಸಿರುವ ಪ್ರಶ್ನೆ. ಈ ರೇಸ್‌ನಲ್ಲಿ ಅಂಬಿಕಾ ಸೋನಿಯ ಹೆಸರು ಮುಂಚೂಣಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಅಂಬಿಕಾ ವಯಸ್ಸು ಮತ್ತು ಆರೋಗ್ಯದ ಕಾರಣದಿಂದ ಸಿಎಂ ಹುದ್ದೆಯ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಎಂಬುವುದು ತಿಳಿದು ಬಂದಿದೆ.
ಅನ್ಯ ಕೋಮಿನ ಯುವತಿ ಜೊತೆಗಿದ್ದ ವ್ಯಕ್ತಿಯ ಹಲ್ಲೆ, ಪುಂಡರು ಅರೆಸ್ಟ್!
ಹಿಂದೂ ವ್ಯಕ್ತಿ ಜೊತೆ ಅನ್ಯಕೋಮಿನ ಸಹೋದ್ಯೋಗಿಯೊಬ್ಬಳಿದ್ದ ಕಾರಣವನ್ನೇ ಮುಂದಿಟ್ಟುಕೊಂಡ ಗುಂಪೊಂದು ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಿಗೆ ಬಂದಿದೆ. ಆದರೆ ಘಟನೆ ವರದಿಯಾದ ಬೆನ್ನಲ್ಲೇ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಹಲ್ಲೆ ನಡೆಸಿದವರನ್ನು ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಸಿಎಂ ಬೊಮ್ಮಾಯಿ ಕೂಡಾ ಟ್ವೀಟ್ ಮಾಡಿ ಆರೋಪಿಗಳ ಬಂಧನವನ್ನು ಖಚಿತಪಡಿಸಿದ್ದಾರೆ.
IPL 2021 ಚೆನ್ನೈ vs ಮುಂಬೈ ಸಂಭಾವ್ಯ ತಂಡ ಹೀಗಿವೆ ನೋಡಿ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಂದ ಯುಎಇ ಚರಣದ ಮೊದಲ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಇದುವರೆಗೂ ಕಾಣಿಸಿಕೊಳ್ಳದ ಸಖತ್ ಸ್ಪೆಷಲ್ ಲುಕ್‌ನಲ್ಲಿ ಶ್ರುತಿ..!
ಸೆ.18 ಅಂದರೆ ಸ್ಯಾಂಡಲ್‌ವುಡ್ ಸ್ಟಾರ್ ನಟ, ನಟಿಯರ ಹುಟ್ಟಿದ ಹಬ್ಬ. ಸೆ.18ರಂದು ಡಾ. ವಿಷ್ಣುವರ್ಧನ್, ಉಪೇಂದ್ರ, ಕರ್ಪೂರದ ಬೊಂಬೆ ಶ್ರುತಿ ಅವರ ಹುಟ್ಟಿದ ದಿನವೂ ಸೆ.18. ನಟಿ ಭಜರಂಗಿ 2 ವಿಶೇಷ ಪಾತ್ರದಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಗ್ ಬಾಸ್ ಒಟಿಟಿ ಟ್ರೋಫಿ, 25 ಲಕ್ಷ ಹಣ ಗೆದ್ದ ದಿವ್ಯಾ!
ಒಟಿಟಿ ಬಿಗ್ ಬಾಸ್‌ನಲ್ಲಿ ಸ್ಪರ್ಧಿಸಿ 25 ಲಕ್ಷ ಹಣ ಗೆದ್ದು, ಟ್ರೋಫಿ ಪಡೆದ ದಿಶಾ ಅಗರ್ವಾಲ್. ನಿರಾಸೆ ಒಬ್ಬಿಬ್ಬರಿಗಲ್ಲಾ.......
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.