ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಸೇವೆಯಿಂದ ವಜಾ

By Suvarna Web DeskFirst Published Apr 19, 2017, 9:58 AM IST
Highlights

ತನ್ನ ರೆಜಿಮೆಂಟ್ ನಲ್ಲಿ ಕಳಪೆ ಆಹಾರ ನೀಡುತ್ತಾರೆಂದು ದೂರಿ ಸಾಮಾಜಿಕ ತಾಣಗಳಲ್ಲಿ ವಿಡಿಯೋಗಳಲ್ಲಿ ಹರಿಯಬಿಟ್ಟ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ರನ್ನು ಸುಳ್ಳು ಆರೋಪ ಮಾಡಿದ್ದಾರೆಂದು ಸೇವೆಯಿಂದ ತೆಗೆದು ಹಾಕಲಾಗಿದೆ.

ನವದೆಹಲಿ (ಏ.19): ತನ್ನ ರೆಜಿಮೆಂಟ್ ನಲ್ಲಿ ಕಳಪೆ ಆಹಾರ ನೀಡುತ್ತಾರೆಂದು ದೂರಿ ಸಾಮಾಜಿಕ ತಾಣಗಳಲ್ಲಿ ವಿಡಿಯೋಗಳಲ್ಲಿ ಹರಿಯಬಿಟ್ಟ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ರನ್ನು ಸುಳ್ಳು ಆರೋಪ ಮಾಡಿದ್ದಾರೆಂದು ಸೇವೆಯಿಂದ ತೆಗೆದು ಹಾಕಲಾಗಿದೆ.

ತೇಜ್ ಬಹದ್ದೂರ್ ಯಾದವ್ ತನ್ನ ಹಿರಿಯ ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆಂದು ಆಂತರಿಕ ತನಿಖೆಯ ಬಳಿಕ ತಿಳಿದು ಬಂದಿದೆ. ಸೇನಾ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ತಾಣಗಳಲ್ಲಿ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. ಹಾಗಾಗಿ ಅವರನ್ನು ಸೇವೆಯಿಂದ ತೆಗೆದು ಹಾಕಲು ನಿರ್ಧರಿಸಲಾಗಿದೆ.ಈ ನಿರ್ಧಾರದ ವಿರುದ್ಧ ಮನವಿ ಸಲ್ಲಿಸಲು ತೇಜ್ ಬಹದ್ದೂರ್ ಗೆ 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.  

click me!