
ಬೆಂಗಳೂರು (ಜ.12): ಪಿಎಫ್‌ಐ ಬದಲು ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ಅವರನ್ನು ಬಚ್ಚಾ ಎಂದು ಜರಿದಿದ್ದಾರೆ.
ಶಿರಾದಲ್ಲಿ ನಡೆದ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಬ್ಯಾನ್ ಮಾಡಲು ನೆಹರು, ಇಂದಿರಾ ಗಾಂಧಿ ಕೈಯಲ್ಲೇ ಆಗಲಿಲ್ಲ. ಇನ್ನು ಬಚ್ಚಾ ಸಿದ್ದರಾಮಯ್ಯನವರ ಕೈಲಿ ಆಗುತ್ತಾ ಎಂದರು.
ಮುಖ್ಯಮಂತ್ರಿಗಳದ್ದು ರಾವಣನ ನಡವಳಿಕೆಯಾಗಿದ್ದು, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ಲ ಬದಲಾಗಿ ರಾವಣ ಇದ್ದಾನೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ದೇಶದಲ್ಲೇ ಧೂಳಿಪಟ ವಾಗಿದ್ದು ಈ ರೀತಿ ಸಿದ್ದರಾಮಯ್ಯ ಮಾತನಾಡಿ ಉಳಿದಿರುವ ಅಲ್ಪಸ್ವಲ್ಪ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿ ದ್ದಾರೆ. ಇಂತಹ ವರನ್ನು ಮನೆಗೆ ಕಳುಹಿಸಿ ಆರೂವರೆ ಕೋಟಿ ಜನ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.