6 ತಿಂಗಳಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರಾ?

Published : Jul 03, 2018, 07:58 AM IST
6 ತಿಂಗಳಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರಾ?

ಸಾರಾಂಶ

ಜೆಡಿಎಸ್‌ ಪ್ರಣಾಳಿಕೆಯಲ್ಲಿ ರಾಜ್ಯದ ರೈತರನ್ನು ಸಾಲದಿಂದ ಮುಕ್ತವಾಗಿಸುವ ಘೋಷಣೆ ಮಾಡಿ, ಈಗ ಕೊಟ್ಟಮಾತನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಪ್ಪಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಪಕ್ಷವಾಗಿರುವ ಬಿಜೆಪಿ ಈ ವಿಷಯವನ್ನು ಹಿಂದೆ ಪಡೆಯಲು ಬಿಡುವುದಿಲ್ಲ. ಸಾಲಮನ್ನಾ ಮಾಡುವುದಾಗಿ ಹೇಳಿ ಇದೀಗ ಬೆಳೆಸಾಲ ಮಾತ್ರ ಮನ್ನಾ ಮಾಡುವುದಾಗಿ ಹೇಳುತ್ತಿರುವುದು ಸರಿಯಲ್ಲ. ಇದು ಸಹ ವಚನಭ್ರಷ್ಟತೆಯ ಪಟ್ಟಪಡೆದುಕೊಳ್ಳಲಿದೆ. ಮತ್ತೆ ಬಿಎಸ್’ವೈ ಸಿಎಂ ಆಗಲಿದ್ದಾರೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ. 

ವಿಜಯಪುರ (ಜೂ. 03): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪರಿಸ್ಥಿತಿ ಡೋಲಾಯಮಾನವಾಗಿದ್ದು, ಇನ್ನಾರು ತಿಂಗಳಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಉಮೇಶ ಕತ್ತಿ ಭವಿಷ್ಯ ನುಡಿದಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿಯವರೇ ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆಂಬ ಹೇಳಿಕೆಗೆ ಪರೋಕ್ಷವಾಗಿ ಉತ್ತರಿಸಿರುವ ಅವರು, ಸಮಯ ಸಿಕ್ಕಿದ್ದರೆ ಇಂದು ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಿದ್ದರು. ಆದರೂ ಇನ್ನಾರು ತಿಂಗಳಿನಲ್ಲಿ ಯಾರ ಹಸ್ತಕ್ಷೇಪವೂ ಇಲ್ಲದೇ ಸರ್ಕಾರ ಪತನವಾಗಲಿದೆ ಎಂದರು.

ಎಚ್‌ಡಿಕೆಯಿಂದ ವಚನಭ್ರಷ್ಟತೆ:

ಜೆಡಿಎಸ್‌ ಪ್ರಣಾಳಿಕೆಯಲ್ಲಿ ರಾಜ್ಯದ ರೈತರನ್ನು ಸಾಲದಿಂದ ಮುಕ್ತವಾಗಿಸುವ ಘೋಷಣೆ ಮಾಡಿ, ಈಗ ಕೊಟ್ಟಮಾತನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಪ್ಪಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಪಕ್ಷವಾಗಿರುವ ಬಿಜೆಪಿ ಈ ವಿಷಯವನ್ನು ಹಿಂದೆ ಪಡೆಯಲು ಬಿಡುವುದಿಲ್ಲ. ಸಾಲಮನ್ನಾ ಮಾಡುವುದಾಗಿ ಹೇಳಿ ಇದೀಗ ಬೆಳೆಸಾಲ ಮಾತ್ರ ಮನ್ನಾ ಮಾಡುವುದಾಗಿ ಹೇಳುತ್ತಿರುವುದು ಸರಿಯಲ್ಲ. ಇದು ಸಹ ವಚನಭ್ರಷ್ಟತೆಯ ಪಟ್ಟಪಡೆದುಕೊಳ್ಳಲಿದೆ. ಈಗ ಸರ್ಕಾರ ಸಾಲಮನ್ನಾ ಮಾಡಿದರೂ ಮುಂಬರುವ ಸರ್ಕಾರಗಳೇ ಅದನ್ನು ಭರಿಸಬೇಕು. ಸಾಲಮನ್ನಾ ವಿಷಯದಲ್ಲಿ ಸರ್ಕಾರ ಹಿಂದೇಟು ಹಾಕಬಾರದು ಎಂದರು.

ಉತ್ತರ ಕರ್ನಾಟಕಕ್ಕೆ ಅನ್ಯಾಯ:

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಸಚಿವ ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿವೆ. ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲು ಉತ್ತರ ಕರ್ನಾಟಕಕ್ಕೂ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕಿತ್ತು ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HD Kumaraswamy birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ