
ಬೆಂಗಳೂರು(ಫೆ.13): ಸಿಎಂ ಸಿದ್ದರಾಮಯ್ಯಗೆ ಬಿ.ಎಸ್.ಯಡಿಯೂರಪ್ಪ ಮತ್ತೊಂದು ಸವಾಲ್ ಹಾಕಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೈಕಮಾಂಡ್'ಗೆ ಒಂದು ಸಾವಿರ ಕೋಟಿ ಹಣ ನೀಡಿದ್ದಾರೆ ಎಂದು ಬಿಎಸ್'ವೈ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಒಂದುವೇಳೆ ಈ ಆರೋಪ ಸಾಬೀತಾದರೆ ತಾವು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಪ್ರತಿ ಸವಾಲ್ ಎಸೆದಿದ್ದರು.
ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯಗೆ ಸವಾಲ್ ಎಸೆದಿರುವ ಬಿಎಸ್‌ವೈ ಆರೋಪ ಸಾಬೀತು ಪಡಿಸಿದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಗೋವಿಂದ ರಾಜ್ ಡೈರಿಯಲ್ಲಿ 65 ಕೋಟಿ ಅಂತ ಉಲ್ಲೇಖವಾಗಿರುವುದು ಸುಳ್ಳಾ? ಎಂದಿರುವ ಅವರು, ನನ್ನ ಬಗ್ಗೆ ನೀವು ಹಗುರವಾಗಿ ಮಾತನಾಡಬೇಡಿ. ಪ್ರಕರಣ ಸಾಬೀತಾದ್ರೆ ನೀವು ರಾಜೀನಾಮೆ ಕೊಡ್ತೀರ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲ್ ಎಸೆದಿದ್ದಾರೆ .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.