ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರಾ ಬಿಎಸ್‌ವೈ ..?

Published : Jun 29, 2018, 08:01 AM IST
ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರಾ ಬಿಎಸ್‌ವೈ ..?

ಸಾರಾಂಶ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆರವು ಮಾಡಲು ಆರ್ ಎಸ್ ಎಸ್ ಸಲಹೆ ನೀಡಿದ್ದ ಬೆನ್ನಲ್ಲೇ ಇದೀಗ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದು ಉತ್ತಮ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಬೆಂಗಳೂರು :   ಮುಂದಿನ ಲೋಸಭೆ ಚುನಾವಣೆವರೆಗೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿ.ಎಸ್‌.ಯಡಿಯೂರಪ್ಪ ಅವರೇ ಮುಂದುವರಿಯುವುದು ಉತ್ತಮ ಎಂದು ರಾಜ್ಯಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ವರ್ಷ ಲೋಕಸಭೆ ಚುನಾವಣೆ ಎದುರಾಗಲಿದೆ.

ಈಗಾಗಲೇ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಬಲಗೊಳಿಸುವಲ್ಲಿ ಯಡಿಯೂರಪ್ಪ ಸಾಕಾಷ್ಟುಶ್ರಮಿಸಿದ್ದಾರೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದು ಉತ್ತಮ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Elon Musk : 'ಹಣದಿಂದ ಸಂತೋಷ ಖರೀದಿಸಲು ಸಾಧ್ಯವಿಲ್ಲ' 800 ಬಿಲಿಯನ್ ಡಾಲರ್ ಗಳಿಸಿದ ಶಾಕಿಂಗ್ ಪೋಸ್ಟ್!
Gadag Municipal Council ಗದಗ: ವರ್ಷ ಕಳೆದರೂ ಗದಗ ನಗರಸಭೆ ಸದಸ್ಯರಿಗೆ ಅಧಿಕಾರವಿಲ್ಲ!