ಈಶ್ವರಪ್ಪ ಬಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಶಾಕ್: ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್ ವಜಾ

Published : Apr 28, 2017, 07:37 AM ISTUpdated : Apr 11, 2018, 01:01 PM IST
ಈಶ್ವರಪ್ಪ ಬಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಶಾಕ್: ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್ ವಜಾ

ಸಾರಾಂಶ

ಈಶ್ವರಪ್ಪ ಬಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಶಾಕ್​​ ನೀಡಿದ್ದಾರೆ. ಆರ್​​ಎಸ್​ಎಸ್​ ಮುಖಂಡ ಸಂತೋಷ್​ ಆಪ್ತನಾಗಿದ್ದ ಮಲ್ಲಿಕಾರ್ಜುನ್​ ಎಂಬಾತನ್ನ ಯಡಿಯೂರಪ್ಪ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು(ಎ.28): ಈಶ್ವರಪ್ಪ ಬಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಶಾಕ್​​ ನೀಡಿದ್ದಾರೆ. ಆರ್​​ಎಸ್​ಎಸ್​ ಮುಖಂಡ ಸಂತೋಷ್​ ಆಪ್ತನಾಗಿದ್ದ ಮಲ್ಲಿಕಾರ್ಜುನ್​ ಎಂಬಾತನ್ನ ಯಡಿಯೂರಪ್ಪ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಲ್ಲಿಕಾರ್ಜುನ್​ ಕಳೆದ 10 ವರ್ಷಗಳಿಂದ ಬಿಜೆಪಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್​​​​​​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅತೃಪ್ತರ ಸಮಾವೇಶದ ವೇಳೆಯಲ್ಲಿ ಮಲ್ಲಿಕಾರ್ಜುನ್​ ಸಹಕಾರ ನೀಡಿದ್ದನು ಎಂಬ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮಲ್ಲಿಕಾರ್ಜುನ್​ ಸಮಾವೇಶ ಕರ ಪತ್ರ ತಯಾರಿಕೆ, ಕೆಲ ನಾಯಕರಿಗೆ ಮೇಲ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಈಗ ಮಲ್ಲಿಕಾರ್ಜುನ್​ನನ್ನು ಬಿಜೆಪಿ ಕಚೇರಿ ಕೆಲಸದಿಂದ ವಜಾಗೊಳಿಸಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೇಮಿಂಗ್ ಕ್ರಿಯೇಟರ್ ಫೆರಾರಿ ಕಾರು ಅಪಘಾತದಲ್ಲಿ ಸಾವು, ಮೊಬೈಲ್‌ನಲ್ಲಿ ಭೀಕರ ದೃಶ್ಯ ಸೆರೆ
Bengaluru: ಯಲಹಂಕದಲ್ಲಿ ನಿರ್ಮಾಣವಾಗಲಿದೆ ಭಾರತದ ಮೊಟ್ಟಮೊದಲ, ಚೀನಾ ಸ್ಟೈಲ್‌ನ ಎತ್ತರಿಸಿದ ರೈಲ್ವೆ ಟರ್ಮಿನಲ್‌!