ನನ್ನನ್ನು ಯಾರು ಪ್ರಶ್ನಿಸುವಂತಿಲ್ಲ : BSY ಪರ ಕಾಂಗ್ರೆಸ್ ನಾಯಕನ ಬ್ಯಾಟಿಂಗ್

Published : Jul 28, 2019, 12:20 PM ISTUpdated : Jul 28, 2019, 01:01 PM IST
ನನ್ನನ್ನು ಯಾರು ಪ್ರಶ್ನಿಸುವಂತಿಲ್ಲ : BSY ಪರ ಕಾಂಗ್ರೆಸ್ ನಾಯಕನ ಬ್ಯಾಟಿಂಗ್

ಸಾರಾಂಶ

ರಾಜ್ಯ ರಾಜಕೀಯದಲ್ಲಿ ದೋಸ್ತಿ ಸರ್ಕಾರ ಉರುಳಿದೆ. ಬಿಜೆಪಿ ಅಧಿಕಾರ ಪಡೆದುಕೊಂಡಿದೆ. ಇದೇ ವೇಳೆ ಗೆದ್ದ ಪಡೆಯೆಡೆ ವಾಲುವ ಮನೋಧರ್ಮ ರಾಜ್ಯ ರಾಜಕೀಯದಲ್ಲಿ ಕಂಡು ಬರುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕರೋರ್ವರು ಬಿ ಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ.

ಬೆಂಗಳೂರು [ಜು.28]: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯಡಿಯೂರಪ್ಪ ಅವರು ಮೋದಿಯಷ್ಟೇ ಪವರ್ ಫುಲ್ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ. 

ತುಮಕೂರಿನಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರದಲ್ಲಿ ಹೇಗೆ ಮೋದಿ ಪ್ರಭಾವ ಇದೆಯೋ ಕರ್ನಾಟಕದಲ್ಲಿ ಯಡಿಯೂರಪ್ಪರ ಪ್ರಭಾವ ಅಷ್ಟೇ ಇದೆ ಎಂದರು.

ಯಡಿಯೂರಪ್ಪನವರಿಗೆ ವಯಸ್ಸಾಗಿರಬಹುದು. ಆದರೂ ಅವರಿಗೆ ಸಾಧಿಸುವ ವಿಲ್ ಪವರ್ ಇದೆ.  ಉತ್ಸಾಹ ಇದೆ. ಅವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ಹಿಂದಿನ ಸರ್ಕಾರ ಕೊಡದಿದ್ದ ವೃದ್ದಾಪ್ಯ ವೇತನ, ಅಂಗವಿಕಲರ ವೇತನ ಶೀಘ್ರ ಬಿಡುಗಡೆ ಮಾಡಲಿ ಎಂದು ರಾಜಣ್ಣ ಹೇಳಿದರು.

ರಾಜೀನಾಮೆ ನೀಡಿದ 14 ಅತೃಪ್ತ ಶಾಸಕರು ಅನರ್ಹ: ಸ್ಪೀಕರ್ ನಿರ್ಧಾರ

ರೈತರ ಸಾಲ ಮನ್ನಾದ ಹಣವನ್ನೂ ಜರೂರು ಬಿಡುಗಡೆ ಮಾಡಲಿ ಎಂದು ಕಾಂಗ್ರೆಸ್ ನಾಯಕ ರಾಜಣ್ಣ ಆಗ್ರಹಿಸಿದರು. ನಾನು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿ ಯಡಿಯೂರಪ್ಪರ ಪ್ರಮಾಣ ವಚನಕ್ಕೆ ಹೋಗಿದ್ದೆ. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ತುಮಕೂರಿನಲ್ಲಿ ಕೆ.ಎನ್.ರಾಜಣ್ಣ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌
ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!