
ಬೆಂಗಳೂರು(ಆ.21): ಡಿನೋಟಿಪೀಕೇಶನ್ ಕೇಸ್ ರೀಓಪನ್ ಮಾಡಿ ಎಸಿಬಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಮೇಲೆ ಎಫ್ಐಆರ್ ದಾಖಲಿಸಿದೆ. ಹೀಗಾಗಿ ಬಿಎಸ್ವೈ ಸದ್ಯ ಬಂಧನದ ಭೀತಿಯಲ್ಲಿದ್ದು ಲೋಕಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಹಾಗೆಯೇ ಎಸಿಬಿ ವಿರುದ್ಧ ಕಾನೂನು ಸಮರ ನಡೆಸಲು ಮುಂದಾಗಿದ್ದಾರೆ.
ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಇಂದು ನ್ಯಾಯಲಯಕ್ಕೆ ಬರಲಿದೆ. ಹೀಗಾಗಿ ಬಿಎಸ್ ವೈ ಇಂದು ಲೋಕಾಯುಕ್ತ ವಿಶೇಷ ನ್ಯಾಯಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಎಲ್ಲಾ ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ಉಳಿದ ಆರೋಪಿಗಳಾದ ಬಸವರಾಜೇಂದ್ರ, ಪ್ರೇಮಚಂದ್ರ, ಗೌರಿಶಂಕರ್, ಸುಬೀರ್ ಹರಿಸಿಂಗ್ ಕೂಡ ಇಂದು ಸಂಜೆ ನೀರಿಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಬಸವರಾಜೇಂದ್ರ ಆರೋಪ ಮಾಡಿರೋದ್ರಿಂದ ಎಸಿಬಿ ಅಧಿಕಾರಿಗಳು ಸಹ ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿದ್ದಾರೆ. ಪ್ರಕರಣ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.