
ಬಾಗಲಕೋಟೆ : ಕ್ಷೇತ್ರದಲ್ಲಿ ಜವಳಿ ಪಾರ್ಕ್, ಬಾದಾಮಿಯ ಕೆಂಧೂರು ಕೆರೆ ತುಂಬಿಸುವುದು ಸೇರಿ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಬರೆದ ಪತ್ರಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾವುದೇ ಬೆಲೆ ನೀಡಿಲ್ಲ!
ಬಾಗಲಕೋಟೆ ಜಿಲ್ಲೆಗೆ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಮಗಾರಿ ಕಾರ್ಯ ಚುರುಕುಗೊಳಿಸಲಾಗುತ್ತದೆ ಎಂದು ಬಜೆಟ್‌ನಲ್ಲಿ ಹೇಳಿರುವುದನ್ನು ಬಿಟ್ಟರೆ ಬಾಗಲಕೋಟೆಗೆ ಈ ಬಜೆಟ್‌ನಲ್ಲಿ ಯಾವುದೇ ಕೊಡುಗೆ ಇಲ್ಲ.
ಗುಳೇದಗುಡ್ಡ, ಕೆರೂರು ಹಾಗೂ ಬಾದಾಮಿಯಲ್ಲಿ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸಲು ಬೃಹತ್ ಕೈಗಾರಿಕೆ ಸ್ಥಾಪಿಸುವಂತೆ ಬೃಹತ್ ಕೈಗಾರಿಕೆ ಸಚಿವ ಕೆ.ಜೆ.ಜಾಜ್‌ರ್ ಅವರಿಗೂ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಅಲ್ಲದೆ, ಐತಿಹಾಸಿಕ ತಾಣಗಳಾದ ಬಾದಾಮಿ, ಪಟ್ಟದಕಲ್ಲು, ಬನಶಂಕರಿ, ಮಹಾಕೂಟಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸೌಲಭ್ಯ ಕಲ್ಪಿಸುವಂತೆ ಕೋರಿದ್ದರು. ಆದರೆ, ಇದ್ಯಾವುದೂ ಬಜೆಟ್‌ನಲ್ಲಿ ಪ್ರಸ್ತಾಪವೇ ಆಗಿಲ್ಲ. ಈ ಮೂಲಕ ಸಿದ್ದರಾಮಯ್ಯ ಅವರ ಕೋರಿಕೆಗೆ ಈ ಬಜೆಟ್‌ನಲ್ಲ ಯಾವ ಬೆಲೆಯನ್ನೂ ನೀಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.