ಯೋಗ ದಿನಕ್ಕೆ ಮುನ್ನ ನರೇಂದ್ರ ಮೋದಿ ಟಿಪ್ಸ್ ಪಾಲಿಸಿ

Published : Jun 06, 2019, 11:20 PM ISTUpdated : Jun 06, 2019, 11:22 PM IST
ಯೋಗ ದಿನಕ್ಕೆ ಮುನ್ನ ನರೇಂದ್ರ ಮೋದಿ ಟಿಪ್ಸ್ ಪಾಲಿಸಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ಕನಸಿನಲ್ಲಿ ಒಂದಾದ ಅಂತಾರಾಷ್ಟ್ರೀಯ ಯೋಗ ದಿನ ಹತ್ತಿರ ಬರುತ್ತಿದೆ. ಇದೇ ಕಾರಣಕ್ಕೆ ಮೋದಿ ಯೋಗಾಸನದ ವಿಡಿಯೋಗಳನ್ನು ಹಂಚಿಕೊಂಡಿದ್ದಲ್ಲದೆ ಅದರ ಪ್ರಯೋಜನಗಳನ್ನು ಬರೆದಿದ್ದಾರೆ.

ನವದೆಹಲಿ[ಜೂ. 06]  ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಇಡೀ ಪ್ರಪಂಚವೇ ಸಿದ್ಧವಾಗುತ್ತಿದೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ ಇದೇ ಕಾರಣಕ್ಕೆ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಡಾಸನದ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಆಸನ ಮಾಡುವುದರಿಂದ ಉಳಿದ ಆಸನಗಳನ್ನು ಸರಾಗವಾಗಿ ಮಾಡಲು ಸಾಧ್ಯವಾಗುತ್ತದೆ ಎಂದು ಬರೆದಿದ್ದಾರೆ.

ಯೋಗವನ್ನು ನಿಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡರೆ ಅನೇಕ ವಿಚಾರಗಳಿಗೆ ಸ್ಫೂರ್ತಿ ಪಡೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ. 2014ರಲ್ಲಿ ಮೋದಿ ಯುಎಸ್ ಜನರಲ್ ಅಸೆಂಬ್ಲಿಯಲ್ಲಿ ಮಾತನಾಡುತ್ತ ಯೋಗ ದಿನದ ಉಲ್ಲೇಖ ಮಾಡಿದ್ದರು. ಅದಾದ ನಂತರ ಯೋಗ ದಿನವನ್ನು ಪ್ರಪಂಚವೇ ಮಾನ್ಯ ಮಾಡಿತು. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ