
ಹುಬ್ಬಳ್ಳಿ(ಸೆ.30): ಕೆಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲಿ ಕುಳಿತು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು ಹುಬ್ಬಳ್ಳಿಯ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುದೀಪ್ ರಾವತ್, ಧೀರತಸಿಂಗ್ ರಾವತ್, ಸೇತುರಾಮ ಗರ್ ಬಂಧಿತ ಬುಕ್ಕಿಗಳಾಗಿದ್ದು, ಬಂಧಿತರಿಂದ ಮೊಬೈಲ್, ನಗದು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ಕೆಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಈ ಮೂವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಮೈದಾನದಲ್ಲಿ ಕುಳಿತು ಟಿವಿಯಲ್ಲಿ ಪ್ರಸಾರವಾಗುವ ಮುನ್ನವೇ ಹರಿಯಾಣದ ಬಿಲ್ಲಿಗೆ ಮಾಹಿತಿ ನೀಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿದ ಇನ್ಸ್‌ಪೆಕ್ಟರ್ ಜಗದೀಶ್ ಹಂಚಿನಾಳ ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.