
ಮಂಗಳೂರು (ಮೇ. 05): ಚುನಾವಣಾ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ವಾಪಾಸು ತೆರಳುತ್ತಿರುವ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಗುಂಡುಗಳು ಪತ್ತೆಯಾದ ಘಟನೆ ನಡೆದಿದೆ.
ಭದ್ರತಾ ಸಿಬ್ಬಂದಿಗಳು ತೀವ್ರ ತಪಾಸಣೆ ನಡೆಸುವ ವೇಳೆ, ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದ 65 ವರ್ಷ ಪ್ರಾಯದ ವ್ಯಕ್ತಿಯ ಬ್ಯಾಗ್‌ನಲ್ಲಿ ಈ ಬುಲೆಟ್ಗಳು ಪತ್ತೆಯಾಗಿವೆ.
ಪ್ರಧಾನಿ ಮೋದಿ ಹೊರಡುವ ವೇಳೆ ಈ ಬುಲೆಟ್‌ಗಳು ಪತ್ತೆಯಾಗಿದ್ದರಿಂದ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ವಿಚಾರಣೆ ವೇಳೆ ವ್ಯಕ್ತಿಯ ಬಳಿ ಪರವಾನಿಗೆ ಹೊಂದಿದ ಶಸ್ತ್ರ ಹೊಂದಿರುವ ವಿಚಾರ ಬಯಲಾಗಿದೆ. ಅದನ್ನು ಪೊಲೀಸ್ ಠಾಣೆಯಲ್ಲಿ ಸರಂಡರ್ ಮಾಡಿದ್ದಾಗಿ ತಿಳಿದು ಬಂದಿದೆ.
ಬ್ಯಾಗ್‌ನಲ್ಲಿ ಬುಲೆಟ್‌ಗಳಿರೋ ವಿಚಾರ ಆ ವ್ಯಕ್ತಿ ಮರೆತಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.