
ಬೆಂಗಳೂರು (ಜ.08): ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸ್ತಬ್ಧವಾಗಿವೆ. ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೋರೆಗಾಂವ್ ಹಿಂಸಾಚಾರ ಖಂಡಿಸಿ ಬಂದ್ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಬಸ್ ಸಂಚಾರವನ್ನೂ ಕೂಡ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಂದ್‌ಗೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲಿ ತೆರೆಯಲಾಗಿದ್ದ ಅಂಗಡಿಗಳಿಗೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.