
ನವದೆಹಲಿ : ಇತ್ತೀಚೆಗಷ್ಟೇ ಇಲ್ಲಿನ ಬುರಾರಿಯಲ್ಲಿ ನೇಣು ಬಿಗಿದುಕೊಂಡು ಒಂದೇ ಕುಟುಂಬದ 11 ಸದಸ್ಯರ ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಹೊರಬಿದ್ದಿವೆ.
11 ಮಂದಿ ಆತ್ಮಹತ್ಯೆ ಮಾಡಿಕೊಂಡ ಮನೆಯ ಬಗ್ಗೆ ಮತ್ತೊಂದು ವಿಚಾರ ಹೊರಬಿದ್ದಿದ್ದು, ಅಲ್ಲಿನ ಸಿಸಿಟವಿ ದೃಶ್ಯಾವಳಿಗಳು ಲಭ್ಯವಾಗಿದೆ.
ಅಲ್ಲದೇ ಅವರು ಕಳೆದ 11 ವರ್ಷಗಳಿಂದಲೂ ಕೂಡ ನಿರ್ವಹಣೆ ಮಾಡುತ್ತಿದ್ದ ಡೈರಿ ಪತ್ತೆಯಾಗಿದೆ. ಅಲ್ಲದೇ ಈ ಡೈರಿಯಲ್ಲಿ ವಿವಿಧ ರೀತಿಯ ವಿಚಾರಗಳನ್ನು ಬರೆಯಲಾಗಿದೆ.
ಇನ್ನು ಮನೆಯಲ್ಲಿ ಅಳವಡಿಸಿದ ಸಿಸಿಟಿವಿ ದೃಶ್ಯ ಪತ್ತೆಯಾಗಿದ್ದು, ವೈರ್ ಗಳು ಹಾಗೂ ಸ್ಟೂಲ್ ಗಳನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಳ್ಳುವ ಜಾಗದಲ್ಲಿ ಹೊಂದಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡು ಬಂದಿದೆ. ಇಷ್ಟಾದರೂ ಕೂಡ ಇದೊಂದು ಬಗೆಹರಿಯದ ವಿಚಾರವಾಗಿದ್ದು, ಪೊಲೀಸರು ಹೆಚ್ಚಿನ ಪ್ರಮಾಣದ ತನಿಖೆಯನ್ನು ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.