
ಬೆಂಗಳೂರು(ಅ.19): ಈಜೀಪುರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 3 ವರ್ಷದ ಮಗು ಸಂಜನಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.
ಈಜಿಪುರದಲ್ಲಿ 3 ದಿನಗಳ ಹಿಂದೆ ಸಿಲಿಂಡರ್ ಸ್ಫೋಟಗೊಂಡು 3 ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಮೃತಪಟ್ಟಿದ್ದರು. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುವಾಗ ಕಟ್ಟಡದ ಅವಶೇಷಗಳಡಿ ಮಗು ಸಿಲುಕಿತ್ತು. ದೇಹದ ಶೇ. 60ರಷ್ಟು ಭಾಗ ಸುಟ್ಟಿದ್ದರು ಜೀವ ಉಳಿದಿತ್ತು. ತೀವ್ರ ಗಾಯಗೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತೀರ್ವ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.