
ಕೊಡಗು (ಮೇ. 27): ಊಟಿ ಬಳಿ ಕಮರಿಗೆ ಬಸ್ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಹದಿನೈದಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಗೊಂಡಿದ್ದಾರೆ.
ಊಟಿಯಿಂದ ಬೆಂಗಳೂರಿಗೆ ವಾಪಸ್ ಬರುವಾಗ ಕೂಡ್ಲೂರಿನ ಸಮೀಪ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ 500 ಅಡಿ ಆಳಕ್ಕೆ ಬಿದ್ದಿದೆ. ಮೃತಪಟ್ಟವರೆಲ್ಲರೂ ಬೆಂಗಳೂರು ನಿವಾಸಿಗಳು. ಸ್ತ್ರೀ ಶಕ್ತಿ ಸಂಘವೊಂದರ ಆಶ್ರಯದಲ್ಲಿ ಊಟಿಗೆ ಟ್ರಿಪ್ ಗೆ ಹೋಗಿದ್ದರು. ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಬಸ್ ನಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.