
ಹಾಸನ[ಮಾ.13]: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಲಕ್ಷ್ಮಿದೇವರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ KSRTC ಬಸ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಮೊಗ್ಗ ರಾಗಿಗುಡ್ಡ ನಿವಾಸಿಗಳಾದ ಸಾಧಿಕ್(22) ಮುಜೀಬಾ(53), ಮುಸ್ಕಾನ್(19) ಮೃತಪಟ್ಟವರೆಂದು ಗುರುತಿಸಲಾಗಿದೆ. ರಾತ್ರಿ ಸುಮಾರು 1.30ಕ್ಕೆ ಈ ದುರ್ಘಟನೆ ಸಂಭವಿಸಿದ್ದು, ಅತಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
ಅಪಘಾತದಲ್ಲಿ ಶಲೀನಾ ಬಾನು, ಇಮ್ರಾನ್ ಅಹಮದ್, ಶಲೀನಾ ತಾಜ್ ಮತ್ತು ಮೊಹಮದ್ ಶಲೀನಾರಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಸೀಕೆರೆ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.