ಘಾಟಿಯಲ್ಲಿ ಉರುಳಿ ಬಿದ್ದ ಬಸ್ : 35 ಮಂದಿ ದುರ್ಮರಣ

Published : Jul 28, 2018, 03:27 PM ISTUpdated : Jul 30, 2018, 12:16 PM IST
ಘಾಟಿಯಲ್ಲಿ ಉರುಳಿ ಬಿದ್ದ ಬಸ್ : 35 ಮಂದಿ ದುರ್ಮರಣ

ಸಾರಾಂಶ

ಘಾಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್ ಉರುಳಿ ಬಿದ್ದು 35ಕ್ಕೂ ಅಧಿಕ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. 

ರಾಯಘಡ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಅತೀ ಆಳದ ಕಂದಕ್ಕೆ ಉರುಳಿ ಬಿದ್ದು 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ಮಹಾರಾಷ್ಟ್ರದ ರಾಯ್ ಘಡದ ಮಹಾಬಲ್ಲೇಶ್ವರ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಂಬೇಲಿ ಘಾಟ್ ನ ಪರ್ವತ ಪ್ರದೇಶದಲ್ಲಿ  ತೆರಳುತ್ತಿದ್ದ ವೇಳೆ  ಬಸ್  250 ರಿಂದ 300 ಅಡಿ ಆಳದ ಕಂದಕಕ್ಕೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. 
 
ಇಲ್ಲಿನ ದೀಪೋಲಿ ಕೃಷಿ ವಿವಿಯ  ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಬಸ್ ನಲ್ಲಿದ್ದರು.  ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. 

ಬಸ್ ನಲ್ಲಿ 60 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು,  ಅಧಿಕ ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ರಿಶಿಕೇಶದ ಆಸ್ಪತ್ರೆಗೆ ಸಾಗಿಸಲಾಗಿದೆ. 

ಕೆಲ ದಿನಗಳ ಹಿಂದೆಯಷ್ಟೇ  ಉತ್ತರಾಖಂಡ್ ನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು 48 ಮಂದಿ ಮೃತಪಟ್ಟಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!