ಕೃಷ್ಣಾ ಮೇಲ್ದಂಡೆ 3 ಹಂತ ಯೋಜನೆಗೆ ಸಚಿವ ಸಂಪುಟ ಅನುಮೋದನೆ

Published : Sep 27, 2017, 04:25 PM ISTUpdated : Apr 11, 2018, 01:01 PM IST
ಕೃಷ್ಣಾ ಮೇಲ್ದಂಡೆ 3 ಹಂತ ಯೋಜನೆಗೆ ಸಚಿವ ಸಂಪುಟ ಅನುಮೋದನೆ

ಸಾರಾಂಶ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಯೋಜನೆಯ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. 51 ಸಾವಿರದ 148 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು (ಸೆ.27): ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಯೋಜನೆಯ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. 51 ಸಾವಿರದ 148 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬರಗಾಲವನ್ನು ಎದುರಿಸುತ್ತಿರುವ ಉತ್ತರ ಕರ್ನಾಟಕಕ್ಕೆ ಇದು  ನೀರಾವರಿ ದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ. ಇದರಿಂದ 6.19 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಾವೇರಿ ವಿವಾದದ ಬಗ್ಗೆ ಮಾತನಾಡುತ್ತಾ, ಕಾವೇರಿ ವಿವಾದದಲ್ಲಿ ನಮ್ಮ ವಾದ ಮುಕ್ತಾಯವಾಗಿದೆ. ಸುಪ್ರೀಂ ಕೋರ್ಟ್ 2 ವಾರ ಅವಕಾಶ ಕೊಟ್ಟಿದೆ.  ಲಿಖಿತ ವರದಿಯನ್ನು ಸಲ್ಲಿಸಲು ಮೂರು ರಾಜ್ಯಗಳಿಗೂ ಅವಕಾಶ ನೀಡಿದೆ.  ನಾವು ಒಂಬತ್ತು ವಿಚಾರಗಳ ಬಗ್ಗೆ ಸಮಗ್ರವಾದ ನೋಟ್ ಸಲ್ಲಿಸುತ್ತೇವೆ. ನೀರು ನಿರ್ವಹಣೆ ಮಂಡಳಿ ನೇಮಕ ವಿಚಾರವಾಗಿ  ಕೇಂದ್ರ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ. ನೀರು ನಿರ್ವಹಣಾ ಮಂಡಳಿಯ ನೇಮಕಕ್ಕೆ ನಮ್ಮ ವಿರೋಧವಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌