ಸತತ 36 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ. ಮೀನುಗಾರರಿಗೆ ಅವರ ಮೃತದೇಹ ಸಿಕ್ಕಿದ್ದು ಇದರಿಂದ ಆತ್ಮಹತ್ಯೆ ಖಚಿತವಾಗಿದೆ.
ಬೆಂಗಳೂರು/ಮಂಗಳೂರು [ಜು.31]: ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರ ಮೃತದೇಹ ಪತ್ತೆಯಾಗಿದೆ.
ಮಂಗಳೂರಿನ ಹೊಯ್ಗೆ ಬಜಾರ್ ಬಳಿಯಲ್ಲಿ ಮೀನುಗಾರರಿಗೆ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ. ಇದರಿಂದ ಆತ್ಮಹತ್ಯೆಗೆ ಶರಣಾಗಿರುವುದು ಖಚಿತವಾದಂತಾಗಿದೆ. 36 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ.
undefined
ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್, ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದರು.
ಡಾ| ರಾಜ್ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಉದ್ಯಮಿ ಸಿದ್ಧಾರ್ಥ್ !
ಆಗಿದ್ದೇನು?: ಸಿದ್ಧಾರ್ಥ್ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ, ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಮಂಗಳೂರಿನಿಂದ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನ ಮೊಗರು ಎಂಬಲ್ಲಿ ಕಾರು ಚಾಲಕನಿಗೆ ಹೇಳಿ ಕೆಳಗಿಳಿದಿದ್ದರು.
ಸಹಿ ಸಿದ್ಧಾರ್ಥ ಅವರದ್ದೇ ಅಲ್ಲ, ವಿದಾಯದ ಲೆಟರ್ ಬರೆದವರು ಯಾರು?
‘ಇಲ್ಲೇ ಇರು, ಈಗ ವಾಪಸ್ ಬರುತ್ತೇನೆ ಎಂದು ಸೂಚಿಸಿ ಮೊಬೈಲ್‌ನಲ್ಲಿ ಮಾತನಾಡುತ್ತ ತೆರಳಿದ್ದರು. ಅರ್ಧ ಗಂಟೆ ಕಳೆದರೂ ವಾಪಸ್ ಬರದಿದ್ದುದರಿಂದ ಸಿದ್ಧಾರ್ಥ್ ಅವರ ಮೊಬೈಲ್‌ಗೆ ಕರೆ ಮಾಡಿದೆ. ಫೋನ್ ಸ್ವಿಚ್ ಆಫ್ ಆಗಿತ್ತು. ಗಾಬರಿಯಾಗಿ ಮನೆಯವರಿಗೆ ತಿಳಿಸಿದೆ’ ಎಂದು ಕಾರಿನ ಚಾಲಕ ಹೇಳಿದ್ದರು.