
ತಿರುಮಲ (ಡಿ.19): ತಿರುಪತಿಯಲ್ಲಿ ಇದೀಗ ಹೊಸದೊಂದು ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಭಕ್ತರಿಗೆ ಸರತಿ ಸಾಲಿನಲ್ಲಿ ನಿಲ್ಲುವ ಬದಲು ಒಂದು ಸಮಯ ನಿಗದಿ ಪಡಿಸಿ ಕಾರ್ಡ್ ನೀಡುವ ವ್ಯವಸ್ಥೆಯನ್ನು ಸೋಮವಾರದಿಂದ ಜಾರಿಗೊಳಿಸಲಾಗಿದೆ. ಹೊಸ ವ್ಯವಸ್ಥೆ ಪ್ರಕಾರ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಗಣಕೀಕೃತ ಕಾರ್ಡ್ ನೀಡಲಾಗುತ್ತದೆ.
ಅದರಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆಯಬೇಕಾದ ಸಮಯವನ್ನು ನಿಗದಿ ಮಾಡಲಾಗುತ್ತದೆ. ಈ ಸಮಯದಲ್ಲಿ ಭಕ್ತರು ನೇರವಾಗಿ ದರ್ಶನದ ಸಾಲನ್ನು ಪ್ರವೇಶಿಸಬಹುದಾಗಿದೆ. ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಮೊದಲ ದಿನದಿಂದ 21 ಸಾವಿರ ಕಾರ್ಡ್'ಗಳನ್ನು ವಿತರಿಸಲಾಗಿದ್ದು, 10 ಸಾವಿರ ಮಂದಿ ಈ ಸೌಲಭ್ಯ ಪಡೆಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.