
ನವದೆಹಲಿ: ಭಾರತದ ನೋಟುಗಳಲ್ಲಿ ರೋಗಾಣು ಹಾಗೂ ಸೋಂಕು ಹರಡುವ ವೈರಾಣುಗಳಿವೆ ಎಂದು ವಾಣಿಜ್ಯೋದ್ಯಮಿಗಳ ಸಂಘಟನೆ ಸಿಎಐಟಿ ಆರೋಪಿಸಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಪತ್ರ ಬರೆದಿರುವ ಸಿಎಐಟಿ, ತನಿಖೆಗೆ ಆಗ್ರಹಿಸಿದೆ.
ಜೊತೆಗೆ ಈ ಕುರಿತು ಅಧ್ಯಯನ ವರದಿ ಹಾಗೂ ಮಾಧ್ಯಮಗಳ ವರದಿಯನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ವಿಜ್ಞಾನ ಮತ್ತು ತ್ರಜ್ಞಾನ ಸಚಿವ ಹರ್ಷವರ್ಧನ್‌ಗೂ ಸಲ್ಲಿಸಲಾಗಿದ್ದು, ಈ ಬಗ್ಗೆ ಅಗತ್ಯ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೋಟಿನಲ್ಲಿರುವ ಬ್ಯಾಕ್ಟೀರಿಯಾಗಳು ಮೂತ್ರ ಸಮಸ್ಯೆ, ಚರ್ಮ ಕಾಯಿಲೆ ಸೇರಿದಂತೆ ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬ ಹಲವು ಅಧ್ಯಯನ ವರದಿಗಳನ್ನಿಟ್ಟುಕೊಂಡು ವಾಣಿಜ್ಯೋದ್ಯಮ ಸಂಘಟನೆ ಈ ಆರೋಪ ಮಾಡುತ್ತಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್, ‘ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪತ್ರಿಕೆಗಳಲ್ಲಿ ಇಂಥ ಸಂಶೋಧನಾ ವರದಿಗಳು ಪ್ರಕಟವಾಗುತ್ತದೆ. ಆದರೆ, ಇದನ್ನು ಯಾವುದೇ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ,’ ಎಂದು ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.