
ತಿರುನೆಲ್ವೇಲಿ: ತಿರುನೆಲ್ವೇಲಿ ಕಲೆಕ್ಟರ್ ಕಚೇರಿ ಆವರಣದಲ್ಲಿ ಕೂಲಿಕಾರ ಕುಟುಂಬವೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರುದ್ಧ ವ್ಯಂಗ್ಯಚಿತ್ರ ಬರೆದು ಬಂಧನಕ್ಕೊಳಗಾಗಿದ್ದ ವ್ಯಂಗ್ಯಚಿತ್ರಕಾರ ಜಿ. ಬಾಲ ಅವರಿಗೆ ಜಾಮೀನು ದೊರೆತಿದೆ.
ಜಾಮೀನಿನ ಮೇಲೆ ಬಿಡುಗಡೆ ಹೊಂದಿದ ಬಾಲ, ತಾನು ಸರ್ಕಾರವನ್ನು ಟೀಕಿಸುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಕಾರ್ಟೂನ್ ಮೂಲಕ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಜಿ.ಬಾಲ ಅವರನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಬಾಲ ಅವರು ಈ ವ್ಯಂಗ್ಯಚಿತ್ರವನ್ನು ತಮ್ಮ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದರು. ತಮಿಳುನಾಡಿನಾದ್ಯಂತ ಅತೀವ ಜನಪ್ರಿಯರಾಗಿರುವ ಬಾಲು ಅವರ ಈ ಕಾರ್ಟೂನು 40 ಸಾವಿರಕ್ಕೂ ಹೆಚ್ಚು ಶೇರ್ ಆಗಿತ್ತು.
ಈ ವ್ಯಂಗ್ಯಚಿತ್ರದಲ್ಲಿ ಸುಟ್ಟುಹೋಗುತ್ತಿರುವ ಮಗುವನ್ನು ರಕ್ಷಿಸದೇ ಪೊಲೀಸ್ ಕಮಿಷನರ್, ನೆಲ್ಲೈ ಕಲೆಕ್ಟರ್ ಮತ್ತು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಹಣದ ಕಂತೆ ಮೂಲಕ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿರುವಂತೆ ಬಿಂಬಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.