ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

Published : Apr 03, 2018, 05:27 PM ISTUpdated : Apr 14, 2018, 01:13 PM IST
ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

ಸಾರಾಂಶ

ನಾವು ರಾಜು ಕುಟುಂಬವನ್ನ ಭೇಟಿ ಮಾಡಿ ವರದಿ ಕೊಡುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆಬಿ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು(ಏ.03): ಮೃತ ರಾಜು ಕುಟುಂಬಕ್ಕೆ ಅಮಿತ್ ಶಾ 5 ಲಕ್ಷ ರೂ. ಪರಿಹಾರ ಭರವಸೆ ಘೋಷಣೆ ಹಿನ್ನೆಲೆಯಲ್ಲಿ ದೆಹಲಿಯ ಚುನಾವಣಾ ಆಯೋಗದಲ್ಲಿ ಅಮಿತ್ ಶಾ ವಿರುದ್ಧ ದೂರು ದಾಖಲಾಗಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದು ದೆಹಲಿಯ ಚುನಾವಣಾ ಆಯೋಗ  ಬೆಂಗಳೂರಿನ ಚುನಾವಣಾ ಆಯೋಗಕ್ಕೆ ಕೇಸ್ ವರ್ಗಾಯಿಸಿದೆ. ಪ್ರಕರಣ ಸಂಬಂಧ ಕುಟುಂಬದವರನ್ನು ಭೇಟಿ ಮಾಡಿ ವರದಿ ನೀಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ನಾವು ರಾಜು ಕುಟುಂಬವನ್ನ ಭೇಟಿ ಮಾಡಿ ವರದಿ ಕೊಡುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆಬಿ ಶಿವಕುಮಾರ್ ತಿಳಿಸಿದ್ದಾರೆ.

ಮತದಾರರನ್ನ ಸೆಳೆಯಲು ನಾಯಕರು ಚುನಾವಣಾಧಿಕಾರಿಗಳ ಮುಂದಾಗಿದ್ದಾರೆ. ಮತದಾರರಿಗೆ ಊಟ ಹಾಕಲು ಅನುಮತಿ ಕೇಳುತ್ತಿದ್ದಾರೆ. ಗಣ್ಯ ವ್ಯಕ್ತಿಗಳು ನನಗೆ ಫೋನ್ ಮಾಡಿ ಅನುಮತಿ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ ಅದ್ಯಾವುದಕ್ಕೂ ನಾವಿನ್ನೂ ಅನುಮತಿ ಕೊಟ್ಟಿಲ್ಲ ಎಂದು  ಕೆಬಿ ಶಿವಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!