ಸಚಿವ ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ

By Web DeskFirst Published Jun 4, 2019, 7:40 AM IST
Highlights

ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವೊಂದರ ತನಿಖೆ ರದ್ಧತಿಗೆ ಇದೀಗ ಆಕ್ಷೇಪ ಎದುರಾಗಿದೆ.  ಹೆಚ್ಚುವರಿ ಸಾಲಿಸೀಟರ್ ಜನರಲ್ ಈ ಬಗ್ಗೆ ಮನವಿ ಮಾಡಿದ್ದಾರೆ.

ಬೆಂಗಳೂರು :  ಕಳೆದ 2017ರ ಐಟಿ ದಾಳಿ ವೇಳೆ ಜಪ್ತಿಯಾದ ಹಣಕ್ಕೆ ಸಂಬಂಧಿಸಿದಂತೆ ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರೆ ಆರೋಪಿಗಳು ಪುರಾವೆ ಒದಗಿಸುವಲ್ಲಿ ವಿಫಲರಾಗಿದ್ದು, ಅವರ ವಿರುದ್ಧ ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯನ್ನು ರದ್ದುಗೊಳಿಸಬಾರದು ಎಂದು ನ್ಯಾಯಾಲಯಕ್ಕೆ ಸೋಮವಾರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಮನವಿ ಮಾಡಿದ್ದಾರೆ.

ತಮ್ಮ ವಿರುದ್ಧ ಇ.ಡಿ. ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಚಿವ ಡಿ.ಕೆ.ಶಿವಕುಮಾರ್‌, ಅವರ ಸಹಾಯಕರಾದ ಎನ್‌.ರಾಜೇಂದ್ರ ಹಾಗೂ ಆಂಜನೇಯ ಹನುಮಂತಯ್ಯ ಅವರು ಸಲ್ಲಿಸಿರುವ ಅರ್ಜಿಗೆ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಕ್ಷೇಪ ಸಲ್ಲಿಸಿದ್ದಾರೆ.

ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸಿಕ್ಕಿದ ಮಾಹಿತಿ ಆಧರಿಸಿ ಇ.ಡಿ. ದಾಖಲಿಸಿರುವ ಎಫ್‌ಐಆರ್‌ ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯಕ್ಕೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತಿಳಿಸಿದರು.

click me!