
ಧಾರವಾಡ [ಜೂ.15] : ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಕಾರಿಗೆ ದಾರಿ ಬಿಡಲು ವಿಳಂಬ ಮಾಡಿದ ಆರೋಪದ ಮೇಲೆ ಸಾರಿಗೆ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಚಿವರ ಆಪ್ತ ಕಾರ್ಯದರ್ಶಿ ಸೂಚನೆ ನೀಡಿದ ಘಟನೆ ಶುಕ್ರವಾರ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಹಳೆ ಬಸ್‌ನಿಲ್ದಾಣ ಮುಂಭಾಗ ಈ ಘಟನೆ ನಡೆದಿದೆ. ಹೊಸವಾಳಕ್ಕೆ ಹೊರಟಿದ್ದ ಬಸ್, ನಿಲ್ದಾಣದಿಂದ ಹೊರ ಬರುವ ವೇಳೆ ಏಕಾಏಕಿ ದೇಶಪಾಂಡೆ ಅವರ ವಾಹನ ಬಂದಿದೆ.
ಇದನ್ನು ಗಮನಿಸದ ಚಾಲಕ ಬಸ್ ಚಾಲನೆ ಮಾಡಿದ್ದಾರೆ. ಈ ವೇಳೆ ಸಚಿವರ ವಾಹನಕ್ಕೆ ದಾರಿ ಬಿಡಲಿಲ್ಲ ಎಂದು ಕೋಪದಿಂದ ಸಚಿವರ ಆಪ್ತ ಚಾಲಕನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜತೆಗೆ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಿಸುವಂತೆ ಪೊಲೀಸರ ಮೇಲೆ ಒತ್ತಡವನ್ನೂ ಹೇರಿದ್ದಾರೆ ಎಂದೂ ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.