
ವಾರಣಾಸಿ: ರಾಮಭಕ್ತ ಹನುಮಂತನಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಕೋರಿ ಮುಲಾಯಂ ಸಿಂಗ್ ಸಹೋದರ ಶಿವಪಾಲ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷವು, ಉತ್ತರ ಪ್ರದೇಶದ ಜಿಲ್ಲಾಡಳಿತಕ್ಕೆ ಮೊರೆ ಇಟ್ಟಿದೆ. 1 ವಾರದೊಳಗೆ ಪ್ರಮಾಣಪತ್ರ ನೀಡದಿದ್ದರೆ, ಪ್ರತಿಭಟನೆಗೆ ನಡೆಸುವುದಾಗಿ ಬೆದರಿಕೆ ಹಾಕಿದೆ.
ಜಾತಿ ಪ್ರಮಾಣಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಲಾಗಿದ್ದು, ಮಹಾರಾಜ ಕೇಸರಿ ಹಾಗೂ ಅಂಜನಾದೇವಿ ಅವರು ಕ್ರಮವಾಗಿ ಆಂಜನೇಯನ ತಂದೆ ಮತ್ತು ತಾಯಿ ಎಂದು ದಾಖಲೆಯಲ್ಲಿ ಹೇಳಲಾಗಿದೆ.
ಆಂಜನೇಯ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್
ಇತ್ತೀಚೆಗಷ್ಟೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಂಜನೇಯ ದಲಿತ ಎಂದು ಹೇಳಿದ್ದರು ಎಂದು ವರದಿಯಾಗಿತ್ತು. ಅಲ್ಲದೆ, ಬಿಜೆಪಿ ಸಂಸದೆ ಹಾಗೂ ಇದೀಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಸಾವಿತ್ರಿ ಬಾಯಿಫುಲೆ ಅವರು ಸಹ ಹನುಮಂತ ದಲಿತನಾಗಿದ್ದು, ಮನುವಾದಿ ಜನರ ಗುಲಾಮನಾಗಿದ್ದ ಎಂದಿದ್ದರು.
ಮಂಗಳಾರತಿ ವೇಳೆ ಪವಾಡ: ಹೊಳೆ ಆಂಜನೇಯನ ದರ್ಶನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ