ಕಾವೇರಿ ವಿವಾದ: ತುರ್ತಾಗಿ ಮಧ್ಯಂತರ ಅರ್ಜಿ ಸಲ್ಲಿಸಿ: ಕಾನೂನು ಪಂಡಿತರ ಸಲಹೆ

By Internet DeskFirst Published Sep 24, 2016, 2:07 PM IST
Highlights

ಬೆಂಗಳೂರು(ಸೆ.24) ಕಾವೇರಿ ವಿಚಾರದಲ್ಲಿ ಸರ್ಕಾರ ಕೈಗೊಂಡ ತೀರ್ಮಾನದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್'ಗೆ ತುರ್ತಾಗಿ ಮಧ್ಯಂತರ ಅರ್ಜಿ ಸಲ್ಲಿಸುವಂತೆ ಕಾನೂನು ಪಂಡಿತರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಆಯೋಜಿಸಿದ್ದ ವಿಚಾರಗೋಷ್ಟಿಯಲ್ಲಿ ಮಾತನಾಡಿದ ಅಶೋಕ್ ಹಾರನಹಳ್ಳಿ, ಸೆಪ್ಟೆಂಬರ್ 27ಕ್ಕೆ ಕಾವೇರಿ ವಿಚಾರಣೆ ತೀರ್ಪು ನೀಡುವುದರೊಳಗಾಗಿ ರಾಜ್ಯ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಬೇಕು. ರಾಜ್ಯದ ಜಲಕ್ಷಾಮದ ಬಗ್ಗೆ ಸುಪ್ರೀಂಗೆ ಸರಿಯಾಗಿ ಮನವರಿಕೆ ಮಾಡಿಕೊಡಬೇಕು, ಕಾವೇರಿ ಜಲಾಶಯದಲ್ಲಿರುವ ನೀರು ಕಡಿಯಲು ಅಗತ್ಯವಾಗಿ ಬೇಕಾಗಿರುವುದರಿಂದ ಸರ್ವೊಚ್ಚ ನ್ಯಾಯಾಲಯದ ತೀರ್ಪನ್ನು ಪಾಲಿಸಲಾಗುತ್ತಿಲ್ಲ ಎನ್ನುವುದನ್ನು ಅರ್ಥಮಾಡಿಸಬೇಕು ಎಂದರು.

ಹೀಗೆ ಮಾಡುವುದರಿಂದ ನ್ಯಾಯಾಂಗನಿಂದನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯ ಎಂದು ಮಾಜಿ ಅಡ್ವಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ

  

click me!