ರಾಜ್ಯ ಸರ್ಕಾರದ ಮುಂದಿನ ನಡೆಯೇನು?

By Internet DeskFirst Published Sep 27, 2016, 2:34 PM IST
Highlights

ಬೆಂಗಳೂರು (ಸೆ.27): ಕಾವೇರಿ ಮೇಲ್ವಿಚಾರಣ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ 3 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಆದರೆ ಕಾವೇರಿ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ಬಿಡಲಾಗುವುದಿಲ್ಲ ಎಂಬುದು ಸರ್ಕಾರದ ವಾದ. ಹಾಗಿದ್ದರೆ ಸರ್ಕಾರದ ಮುಂದಿರುವ ಹಾದಿಗಳೇನು?

ವಿಧಾನಸಭೆ ನಿರ್ಣಯವನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ, ಬೇರೆ ಹಾದಿಯತ್ತ ಚಿಂತಿಸಬಹುದು. ಎರಡೂ ರಾಜ್ಯಗಳ ಸಿಎಂ ಕುಳಿತು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

3 ದಿನಗಳ ಕಾಲ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಬಹುದು.

ಸುಪ್ರೀಂಕೋರ್ಟ್ ಆದೇಶ ಪಾಲಿಸಿ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬಹುದು.

ವಿಧಾನಸಭೆ ನಿರ್ಣಯದಂತೆ ನೀರು ಬಿಡದಿರಲು ರಾಜ್ಯ ಸರ್ಕಾರ ನಿರ್ಧರಿಸಬಹುದು.

ಕುಡಿಯಲಷ್ಟೇ ನೀರಿದೆ. ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕೋರ್ಟ್ ಮೊರೆ ಹೋಗಬಹುದು.

ಸಮಸ್ಯೆ ಪರಿಹಾರ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ಒತ್ತಾಯಿಸಬಹುದು.

click me!