
ಮಂಡ್ಯ(ಸೆ.24): ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ ಮತ್ತು ಬಂಧಿತ ರೈತರ ಬಿಡುಗಡೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಸಭೆ ಅಧ್ಯಕ್ಷ ಜಿ.ಮಾದೇಗೌಡರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭರವಸೆ ನಿಟ್ಟಿನಲ್ಲಿ ಚಳವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಇಂದು ನಡೆದ ಕಾವೇರಿ ಹಿತರಕ್ಷಣಾ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಹೇಳಿದರು. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾದೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.