ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೈತ

Published : Sep 07, 2016, 05:29 AM ISTUpdated : Apr 11, 2018, 12:38 PM IST
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಸಾರಾಂಶ

ಬೆಂಗಳೂರು(ಸೆ.07): ರೈತರ ಪ್ರತಿಭಟನೆ ನಡುವೆಯೂ ತಮಿಳುನಾಡಿಗೆ ನಿನ್ನೆ ಸಂಜೆಯಿಂದ ಕಾವೇರಿ ಹರಿಯುತ್ತಿದ್ದಾಳೆ. ಇದ್ರಿಂದ ಕಾವೇರಿ ಕೊಳ್ಳದ ರೈತರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ನಿನ್ನೆ  ಸಂಜೆ ರೈತನೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನೂ ಮುಂಜಾಗ್ರತ ಕ್ರಮವಾಗಿ ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಕೆಆರ್​ಎಸ್​ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ನಿನ್ನೆ ಸಂಜೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ರೈತರ ಆಕ್ರೋಶ ಮತ್ತಷ್ಟು ಸ್ಫೋಟಗೊಂಡಿದೆ.

ಕಾವೇರಿ ನದಿಗೆ ಹಾರಿ ರೈತ ಆತ್ಮಹತ್ಯೆಗೆ ಯತ್ನ

ಹೌದು ತಮಿಳುನಾಡಿಗೆ ಕಾವೇರ ನೀರು ಬಿಡುಗಡೆಗೆ ವಿರೋಧ  ವ್ಯಕ್ತಪಡಿಸಿ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ. ಕೆಂಗಾಲ್ ಕೊಪ್ಪಿನ ರೈತ ಸೂರಿ ಎಂಬಾತ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿಯಿರುವ ಕಾವೇರಿ ನದಿಗೆ ಹಾರಿದ್ದಾನೆ. ತಕ್ಷಣವೇ  ಅಗ್ನಿಶಾಮಕ ಸಿಬ್ಬಂದಿ, ಸೂರಿಯನ್ನು ರಕ್ಷಣೆ ಮಾಡಿದ್ದಾರೆ.

ಮತ್ತೆ 2 ದಿನ ಮಂಡ್ಯ ಶಾಲಾ-ಕಾಲೇಜುಗಳಿಗೆ ರಜೆ

ತೀವ್ರ ವಿರೋಧದ ನಡುವೆಯೂ ಸುಪ್ರಿಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತದೆ.ಇದ್ರಿಂದ ಮತ್ತಷ್ಟು ಸಿಟ್ಟಿಗೆದ್ದಿರುವ ರೈತರು ಇವತ್ತು ಕೂಡ ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ  ಸೆಪ್ಟೆಂಬರ್ 9 ರಂದು ಕನ್ನಡಪರ ಸಂಘಟನೆಗಳ ಒಕ್ಕೂಟ  ಕರ್ನಾಟಕ ಬಂದ್‌ಗೆ ಕರೆ ನೀಡಿದೆ.  ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಂಡ್ಯ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಅಲ್ದೇ ಆಯಾಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಇನ್ನೂ ನಿನ್ನೆ ಕಾವೇರಿ ಕಿಚ್ಚಿಗೆ ಮಂಡ್ಯ ಅಕ್ಷರಶಃ ಬೆಂಕಿ ಕುಂಡವಾಗಿತ್ತು. ನಿನ್ನೆ ಬೆಳಗ್ಗೆಯಿಂದಲೇ ಬೀದಿಗಿಳಿದ ರೈತರು, ರಸ್ತೆ ತಡೆ ನಡೆಸಿದ್ರು. ಕೆಲ ಲಾರಿಗಳ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರಧಾನಿ ಮೋದಿ, ಮಾಜಿ ಸಂಸದೆ ರಮ್ಯಾ ಪೋಸ್ಟರ್​ಗಳಿಗೆ ಚಪ್ಪಲಿಯಿಂದ ಹೊಡೆದು ಸುಟ್ಟರು. ಅಲ್ದೆ ಮಂಡ್ಯದ ಲೋಕೋಪಯೋಗಿ ಕಚೇರಿಗೆ ನುಗ್ಗಿ ಹೂಕುಂಡ ಸೇರಿದಂತೆ ಹಲವು ವಸ್ತುಗಳನ್ನ ಧ್ವಂಸಗೊಳಿಸಿದ್ರು.

ಒಟ್ಟಾರೆ ರೈತರಂತೂ ಪ್ರಾಣ ಬಿಟ್ಟೇವು, ನೀರು ಬಿಡೆವು ಅಂತ ಬೀದಿಗಿಳಿದ್ದಾರೆ. ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿ ನಿನ್ನೆ ಸಂಜೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ಕಾವೇರಿ ಕಿಚ್ಚು ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು