ದಾಬೋಲ್ಕರ್ ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ

By Suvarna Web DeskFirst Published Mar 1, 2017, 3:46 PM IST
Highlights

ವಿಚಾರವಾದಿ ಹಾಗೂ ಕಾರ್ಯಕರ್ತ ನರೇಂದ್ರ ದಾಬೋಲ್ಕರ್ ಹತ್ಯೆಯ ಪ್ರಮುಖ ಆರೋಪಿಗಳಾದ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ.

ನವದೆಹಲಿ(ಮಾ.01): ವಿಚಾರವಾದಿ ಹಾಗೂ ಕಾರ್ಯಕರ್ತ ನರೇಂದ್ರ ದಾಬೋಲ್ಕರ್ ಹತ್ಯೆಯ ಪ್ರಮುಖ ಆರೋಪಿಗಳಾದ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ.

2013, ಆ.20 ರಂದು ದಾಬೋಲ್ಕರ್ ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಖಂಡೇಲ್ವಾಲರನ್ನು ಪೊಲೀಸರು ಬಂಧಿಸಿದ್ದರು. ಆಗ ಸಿಬಿಐ ವಿಚಾರಣೆ ವೇಳೆ ನನ್ನ ಹಾಗೂ ನನ್ನ ಸಹವರ್ತಿ ಮನೀಶ್ ನಾಗೋರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್) ಸುಳ್ಳು ಪ್ರಕರಣವನ್ನು ದಾಖಲಿಸಿದೆ.  ವಿಚಾರಣೆ ವೇಳೆ ಒತ್ತಾಯಪೂರ್ವಕವಾಗಿ ತಪ್ಪೊಪ್ಪಿಕೊಳ್ಳುವಂತೆ ಹೇಳಿದ್ದಾರೆ ಎಂದು ಹೇಳಿದ್ದ.

ಗೋವಿಂದ ಪನ್ಸಾರೆ ಮತ್ತು ದಾಬೋಲ್ಕರ್ ಹತ್ಯೆಯ ನಿಧಾನಗತಿ ತನಿಖೆಗೆ ಬಾಂಬೆ ಹೈಕೋರ್ಟ್ ಜನವರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ. ಸಿಬಿಐ. ವಿಶೇಷ ತನಿಖಾ ದಳಕ್ಕೆ ಚುರುಕು ಮುಟ್ಟಿಸಿದೆ. ಸಮಯವನ್ನು ಗಮನದಲ್ಲಿಟ್ಟುಕೊಳ್ಳಿ. ಪ್ರಕರಣದ ತನಿಖೆಯಲ್ಲಿ ಶಕ್ತಿಯನ್ನು ವ್ಯರ್ಥಗೊಳಿಸಬೇಡಿ ಎಂದು ಕೋರ್ಟ್ ಹೇಳಿದೆ.

ಇದೀಗ ತನಿಖೆ ಚುರುಕುಗೊಳಿಸಿರುವ ಸಿಬಿಐ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ ಕೊಡುವುದಾಗಿ ಘೋಷಿಸಿದೆ.  

click me!