
ಬೆಂಗಳೂರು[ಏ. 03] ಜಯನಗರದ ಕಾಫಿ ಡೇಯಲ್ಲಿ ಲಂಚ ಪಡೆಯುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಯನ್ನು ಬಂಧಿಸಿದ ಕೆಲವೇ ಹೊತ್ತಿನಲ್ಲಿ ಸಿಬಿಐ ಅಧಿಕಾರಿಗಳು ಮತ್ತೊಬ್ಬ ಅಧಿಕಾರಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಜಯನಗರದ ಕೆಫೆ ಕಾಫಿಡೇನಲ್ಲಿ ಇಂದು [ಬುಧವಾರ] ಸಂಜೆ ಗುತ್ತಿಗೆದಾರನಿಂದ 14ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ನಾಗೇಶ್ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಈಗ ಮತ್ತೊಬ್ಬ ಐಟಿ ಅಧಿಕಾರಿ ನರೇಂದ್ರ ಸಿಂಗ್ ಎಂಬುವರನ್ನು ಎಚ್ಎಸ್ಆರ್ ಲೇಔಟ್ ನ ಮನೆ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಲಂಚ ಪಡೆಯುತ್ತಿದ್ದ ಐಟಿ ಅಧಿಕಾರಿ ಅರೆಸ್ಟ್
40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದ 2ನೇ ಆರೋಪಿ ನರೇಂದ್ರ ಸಿಂಗ್ ಆಗಿದ್ದಾರೆ. ಇತ್ತೀಚೆಗಷ್ಟೇ ಈ ಐಟಿ ಅಧಿಕಾರಿಗಳು ಗುತ್ತಿಗೆದಾರ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಿಂದ ಶ್ರೀನಿವಾಸ್ ಅವರನ್ನು ಖುಲಾಸೆಗೊಳಿಸುವ ಸಲುವಾಗಿ ಹಣದ ಬೇಡಿಕೆ ಇಟ್ಟಿದ್ದರು. ಆ ಹಣವನ್ನು ಸ್ವೀಕರಿಸುತ್ತಿದ್ದಾಗ ನಾಗೇಶ್ ಮೊದಲು ಬಲೆಗೆ ಬಿದ್ದಿದ್ದು ಈಗ ಎರಡನೇ ಆರೋಪಿ ನರೇಂದ್ರ ಸಿಂಗ್ ಅವರನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.