ಸಿಬಿಐ ನಿರ್ದೇಶಕ ವಜಾ: ಸೇಡು ತೀರಿಸಿಕೊಂಡ್ರಾ ಮೋದಿ..?

By Web DeskFirst Published Jan 10, 2019, 8:02 PM IST
Highlights

ಸಿಬಿಐ ಹಾಗೂ ಮೋದಿ ಸರ್ಕಾರದ ಹಗ್ಗಜಗ್ಗಾಟ ಮುಂದುವರಿದಿದೆ.  ಮೋದಿ ಸರ್ಕಾರದ ವಿರುದ್ಧ ತೊಡೆತಟ್ಟಿ ಸುಪ್ರೀಂ ಮೆಟ್ಟಿಲೇರಿ ಮತ್ತೆ ಅಧಿಕಾರಕ್ಕೆ ಬಂದಿದ್ದ ಸಿಬಿಐ ನಿರ್ದೇಶಕ ಸಂಕಷ್ಟಕ್ಕೆ ಸಿಲುಕಿದ್ದಾರೆ. 


ನವದೆಹಲಿ. [ಜ.10] ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಹಾಗೂ ಕಾಂಗ್ರೆಸ್​ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಡಿಎಸ್​ಪಿಇ ಆಯ್ಕೆ ಸಮಿತಿ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ಕೇಂದ್ರಕ್ಕೆ ಸುಪ್ರೀಂ ಚಾಟಿ: ಸಿಬಿಐ ನಿರ್ದೇಶಕರಾಗಿ ಅಲೋಕ ವರ್ಮಾ!

ವರ್ಮಾ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸಿಬಿಐ ಹಿರಿಯ ಅಧಿಕಾರಿಗಳ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಅ. 23ರ ಮಧ್ಯರಾತ್ರಿ ಅಲೋಕ್​ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು. 

ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?

ಆದ್ರೆ ಕೇಂದ್ರದ ಆದೇಶವನ್ನು ಸುಪ್ರೀಂ ಕೋರ್ಟ್​ ಮಂಗಳವಾರ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅಲೋಕ್​ ವರ್ಮಾ ಬುಧವಾರ ಕರ್ತವ್ಯಕ್ಕೆ ಮರಳಿದ್ದರು. 

click me!