
ಹೊಸದಿಲ್ಲಿ: ಐಎನ್‌ಎಕ್ಸ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಿಲ್ಲಿ ಹೈ ಕೋರ್ಟ್ ಕಾರ್ತಿ ಚಿದಂಬರಂಗೆ ಮಾರ್ಚ್ 20ರವೆಗೆ 'ದಬ್ಬಾಳಿಕೆಯ ಕ್ರಮ' ಕೈ ಕೊಳ್ಳದಂತೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಸಿಬಿಐ ವಿಶೇಷ ನ್ಯಾಯಾಲಯ ಕಾರ್ತಿಯ ಕಸ್ಡಡಿಯನ್ನು ಮಾರ್ಚ್ 12ರವೆಗೆ ವಿಸ್ತರಿಸಿದೆ.
ಈ ಸಮಯದಲ್ಲಿ ಸಿಎಯೊಂದಿಗೆ, ಕಾರ್ತಿಯನ್ನು ವಿಚಾರಣೆಗೊಳಿಪಡಿಸಲಾಗುವುದು. ಮಾ.29ರವರೆಗೆ ಕಾರ್ತಿಯನ್ನು ಬಂಧಿಸದಂತೆ ಹೈ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಿದೆ.
ಮಾರ್ಚ್ 15ರಂದು ಕಾರ್ತಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿರುವ ವಿಶೇಷ ನ್ಯಾಯಾಧೀಶರ ಮುಂದೆ ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ಕಾರ್ತಿಯನ್ನು ಹಾಜರುಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯದಿಂದ ಬಂಧಿತರಾದ ಕಾರ್ತಿ ಸಿಎ ಎಸ್.ಭಾಸ್ಕರರಾಮನ್‌ರೊಂದಿಗೆ ಕಾರ್ತಿಯನ್ನು ವಿಚಾರಣೆಗೊಳಪಡಿಸಲು ಸಿಬಿಐ ಅನುಮತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.