
ಚೆನ್ನೈ : ತಮಿಳುನಾಡು ಆರೋಗ್ಯ ಸಚಿವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಆರೋಗ್ಯ ಸಚಿವ ಸಿ. ವಿಜಯಾ ಭಾಸ್ಕರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬಹುಕೋಟಿ ಗುಟ್ಕಾ ಹಗರಣದ ಆರೋಪ ಎದುರಾಗಿದ್ದು ಈ ನಿಟ್ಟಿನಲ್ಲಿ ದಾಳಿ ನಡೆಸಲಾಗಿದೆ.
ಅಲ್ಲದೇ ಚೆನ್ನೈನ 40 ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆದಿದ್ದು ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಎಸ್. ಜಾರ್ಜ್ ಹಾಗೂ ಮಾಜಿ ಸಚಿವ ರಮಣ ಅವರಿಗೆ ಸೇರಿದ ಪ್ರದೇಶಗಳ ಮೇಲೂ ದಾಳಿ ನಡೆದಿದೆ.
ಈ ಪ್ರಕರಣವನ್ನು ಕಳೆದ ಏಪ್ರಿಲ್ 26 ರಂದು ಸಿಬಿಐಗೆ ವಹಿಸಲು ಮದ್ರಾಸ್ ಹೈ ಕೋರ್ಟ್ ಸೂಚನೆ ನೀಡಿತ್ತು. ಚೆನ್ನೈ ನಲ್ಲಿ 2017ರ ಜುಲೈನಲ್ಲಿ ಬಹುಕೋಟಿ ಮೊತ್ತದ ಗುಟ್ಕಾ ಹಗರಣವು ಬೆಳಕಿಗೆ ಬಂದಿದ್ದು ಇದರಲ್ಲಿ ಭಾರೀ ಪ್ರಮಾಣದಲ್ಲಿ ತೆರಿಗೆ ವಂಚನೆ ಮಾಡಿರುವ ಆರೋಪ ಎದುರಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.