ನನ್ನನ್ನು ವಿಚಾರಣೆ ಮಾಡಲಿ, ಪುತ್ರನಿಗೆ ಕಿರುಕುಳ ಬೇಡ

Published : Sep 15, 2017, 11:52 PM ISTUpdated : Apr 11, 2018, 12:50 PM IST
ನನ್ನನ್ನು ವಿಚಾರಣೆ ಮಾಡಲಿ, ಪುತ್ರನಿಗೆ ಕಿರುಕುಳ ಬೇಡ

ಸಾರಾಂಶ

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ 2006ರಲ್ಲಿ ಏರ್‌ಸೆಲ್- ಮ್ಯಾಕ್ಸಿಸ್ ಒಪ್ಪಂದಕ್ಕೆ ವಿದೇಶಿ ಬಂಡವಾಳ ಹೂಡಿಕೆ ಅನುಮತಿ ನೀಡಿದ್ದರ ಸಂಬಂಧ ಸಿಬಿಐ ಕಾರ್ತಿ ಚಿದಂಬರಂ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ನವದೆಹಲಿ(ಸೆ.15): ಏರ್‌ಸೆಲ್- ಮ್ಯಾಕ್ಸಿಸ್ ಪ್ರಕರಣದಲ್ಲಿ ತಮ್ಮ ಪುತ್ರ ಕಾರ್ತಿಗೆ ಕಿರುಕುಳ ನೀಡುವ ಬದಲು ಸಿಬಿಐ ತಮ್ಮನ್ನು ಪ್ರಶ್ನೆ ಮಾಡಬೇಕು ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಸಿಬಿಐ ತಪ್ಪು ಮಾಹಿತಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ 2006ರಲ್ಲಿ ಏರ್‌ಸೆಲ್- ಮ್ಯಾಕ್ಸಿಸ್ ಒಪ್ಪಂದಕ್ಕೆ ವಿದೇಶಿ ಬಂಡವಾಳ ಹೂಡಿಕೆ ಅನುಮತಿ ನೀಡಿದ್ದರ ಸಂಬಂಧ ಸಿಬಿಐ ಕಾರ್ತಿ ಚಿದಂಬರಂ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ವಿಚಾರಣೆಗೆ ಹಾಜರಾಗುಲು ನಿರಾಕರಿಸಿದ್ದ ಕಾರ್ತಿ ಚಿದಂಬರಂ, ವಿಶೇಷ ಕೋರ್ಟ್ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ ಮತ್ತು ವಿಚಾರಣೆಯನ್ನು ರದ್ದುಗೊಳಿಸಿದೆ.

ಆದರೆ, ಸಿಬಿಐ ಮಾತ್ರ ವಿಚಾರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಹೇಳಿಕೊಳ್ಳುತ್ತಿದೆ ಎಂದು ಹೇಳಿದ್ದರು. ಏರ್‌ಸೆಲ್- ಮ್ಯಾಕ್ಸಿಸ್ ಒಪ್ಪಂದಕ್ಕೆ ‘ನಾನು ಸಚಿವನಾಗಿದ್ದಾಗ ಅನುಮತಿ ನೀಡಿದ್ದೆ. ಹೀಗಾಗಿ ಸಿಬಿಐ ನನ್ನನ್ನು ವಿಚಾರಣೆ ನಡೆಸಬೇಕು. ಪುತ್ರ ಕಾರ್ತಿಗೆ ಅನಾವಶ್ಯಕ ಕಿರುಕುಳ ನೀಡಬಾರದು. ಪ್ರಕರಣದಲ್ಲಿ ಸಿಬಿಐ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿದೆ’ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಲೆ ಏರಿಕೆಗೂ ಮುನ್ನ iPhone 17 Pro Max ಫೋನ್‌ಗೆ ಭಾರತದಲ್ಲಿ ಭಾರೀ ಆಫರ್‌, ಹೊಸ ಆಫರ್‌ನಲ್ಲಿ ಏನಿದೆ?
ಮೂಲ ಕಾವೇರಿ ಒಡಲಲ್ಲೇ ಬರದ ಛಾಯೆ! ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಸಂಕಷ್ಟ