ಅಶ್ಲೀಲ ಚಿತ್ರ ವೀಕ್ಷಣೆಗೆ ಬ್ರೇಕ್ ಹಾಕಲು ಶಾಲೆಗಳಲ್ಲಿ ಜಾಮರ್

By Suvarna Web DeskFirst Published Jul 15, 2017, 12:28 PM IST
Highlights

ಮಕ್ಕಳಲ್ಲಿ ಹೆಚ್ಚುತ್ತಿರುವ ಅಶ್ಲೀಲ ಚಿತ್ರ ವೀಕ್ಷಣೆ ತಡೆಯುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ಜಾಮರ್ ಅಳವಡಿಸುವ ಬಗ್ಗೆ ಪರಿಶೀಲಿಸುವಂತೆ ಸಿಬಿಎಸ್’ಇ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್’ಗೆ ಮಾಹಿತಿ ನೀಡಿದೆ.

ನವದೆಹಲಿ : ಮಕ್ಕಳಲ್ಲಿ ಹೆಚ್ಚುತ್ತಿರುವ ಅಶ್ಲೀಲ ಚಿತ್ರ ವೀಕ್ಷಣೆ ತಡೆಯುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ಜಾಮರ್ ಅಳವಡಿಸುವ ಬಗ್ಗೆ ಪರಿಶೀಲಿಸುವಂತೆ ಸಿಬಿಎಸ್’ಇ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್’ಗೆ ಮಾಹಿತಿ ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರ ವೆಬ್’ಸೈಟ್ ಮುಚ್ಚುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ  ಸರ್ಕಾರ  ಮಾಹಿತಿ ನೀಡಿದೆ.

ಜೊತೆಗೆ ಕಳೆದ ತಿಂಗಳು ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸುವ 3500ಕ್ಕೂ ಹೆಚ್ಚು ವೆಬ್’ಗಳನ್ನು ಮುಚ್ಚಲಾಗಿದೆ ಎಂದು ಹೇಳಿದೆ. ಈ ನಡುವೆ ಶಾಲಾ ಬಸ್’ಗಳಲ್ಲಿ ಜಾಮರ್ ಅಳವಡಿಕೆ ಸಾದ್ಯವಿಲ್ಲ ಎಂದು ಸರ್ಕಾರ ಹೇಳಿದೆ.

click me!