ನೇತ್ರಾವತಿ ಸೇತುವೆ ಬಳಿ ಆಗಮಿಸುವ ಮುನ್ನ ಪತ್ರ ಪೋಸ್ಟ್ ಮಾಡಿದ್ದ ಸಿದ್ಧಾರ್ಥ

By Web Desk  |  First Published Aug 2, 2019, 10:08 AM IST

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ‘ಕಾಫಿ ಕಿಂಗ್‌’ ಸಿದ್ಧಾರ್ಥ ಅವರು ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆಗೆ ಶರಣಾದರು. ಅದಕ್ಕೂ ಮುನ್ನ ನಡೆದ ಹಲವು ವಿಚಾರಗಳನ್ನು ಅವರ ಚಾಲಕ ಬಿಚ್ಚಿಟ್ಟಿದ್ದಾರೆ. 


ಬೆಂಗಳೂರು [ಆ.02]:  ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ‘ಕಾಫಿ ಕಿಂಗ್‌’ ಸಿದ್ಧಾರ್ಥ ಅವರು ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆಗೆ ಶರಣಾದರು. 

ಸಿದ್ಧಾರ್ಥ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಬೇರೆ ಬೇರೆ ಮಾಹಿತಿಗಳು ಲಭ್ಯವಾಗುತ್ತಿದೆ. ಕಂಕನಾಡಿ ನಗರ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಸಿದ್ಧಾರ್ಥ ಅವರ ಕಾರು ಚಾಲಕ ಬಸವರಾಜ ಪಾಟೀಲ್‌ ಹಲವು ಮಾಹಿತಿ ನೀಡಿದ್ದಾರೆ. 

Tap to resize

Latest Videos

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿ ಸಿದ್ಧಾರ್ಥ ಪತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ ಎಂದು ಚಾಲಕ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಆದರೆ ಯಾರಿಗೆ ಪೋಸ್ಟ್‌ ಮಾಡಿದ್ದಾರೆ? ಎಂಬ ಮಾಹಿತಿ ತಿಳಿದುಬಂದಿಲ್ಲ.

click me!