
ತುಮಕೂರು(ಜುಲೈ 19): ಎರಡು ದಿನಗಳ ಹಿಂದೆ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದ್ದ ಪೀಠೋಪಕರಣಗಳ ಧ್ವಂಸ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಿಜೆಪಿಯ ಮಾಜಿ ಶಾಸಕ ಜೆ.ಸಿ.ಮಾದುಸ್ವಾಮಿ ಹಾಗೂ ಕಾರ್ಯಕರ್ತರು ಪಿಠೋಪಕರಣ ದ್ವಂಸಗೊಳಿಸಿದ ಸಿಸಿಟಿಟಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜುಲೈ 17ರಂದು ರೈತರಿಗೆ ಬಗರ್ ಹುಕುಂ ಹಕ್ಕುಪತ್ರ ವಿತರಸಿಲು ಆಗ್ರಹಿಸಿ , ಬಿಜೆಪಿ ಮಾಜಿ ಶಾಸಕ ಜೆಸಿ ಮಾದುಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮಾದುಸ್ವಾಮಿ ರೈತರೊಂದಿಗೆ ತೆರಳಿ ತಹಶಿಲ್ದಾರ್ ಗಂಗೇಶ್‍ಗೆ ಮನವಿ ಪತ್ರ ಸಲ್ಲಿಸಿದ್ದರು. ನಂತರ ರೈತರೊಬ್ಬರ ಮುಂದೆ ತಹಶಿಲ್ದಾರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಮಾದುಸ್ವಾಮಿ ಬೆಂಬಲಿಗರು ತಹಶಿಲ್ದಾರ್ ಕಚೇರಿ ಕಿಟಕಿ ಬಾಗಿಲುಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಚಿಕ್ಕನಾಯಕಹಳ್ಳಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದರು.
ಅಮಾಯಕರನ್ನು ಬಂಧಿಸಲಾಗಿದೆ. ಅವರ ಬದಲಿಗೆ ನನ್ನನ್ನು ಬಂಧಿಸಿ ಎಂದು ಮಾದುಸ್ವಾಮಿ ಚಿಕ್ಕನಾಯಕನಹಳ್ಳಿ ಠಾಣೆ ಮುಂದೆ ನಿನ್ನೆ ಪ್ರತಿಭಟನೆ ನಡೆಸಿದ್ದರು. ಇದೀಗ ಪಿಠೋಪರಕರಣ ದ್ವಂಸಗೊಳಿಸಿದ ವಿಡಿಯೋ ವೈರಲ್ ಆಗಿದ್ದು, ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಅಲ್ಲದೇ, ತಾಲೂಕಿನಾದ್ಯಂತ ಬಿಸಿ ವಾತಾವರಣ ಸೃಷ್ಟಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.