
ನವದೆಹಲಿ(ಅ.21): ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆವರೆಗೂ ಮಹಾರಾಷ್ಟ್ರದಲ್ಲಿ ಶೇ.18.5 ಹಾಗೂ ಹರಿಯಾಣದಲ್ಲಿ ಶೇ.27ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮಹಾರಾಷ್ಡ್ರ ವಿಧಾನಸಭೆ ಚುನಾವಣೆ ನಿಮಿತ್ತ ರಾಜಧಾನಿ ಮುಂಬೈನಲ್ಲಿ ಬಾಲಿವುಡ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಷ್ಠಿತರು ಮತದಾನ ಮಾಡಿ ಗಮನ ಸೆಳೆದರು. ಮುಂಬೈನ ಮತಗಟ್ಟೆಗಳಲ್ಲಿ ಬಾಲಿವುಡ್ ನಟ, ನಟಿಯರು, ರಾಜಕೀಯ ಮುಖಂಡರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ಗಮನ ಸೆಳೆದರು.
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕುಟುಂಬ ಸಮೇತರಾಗಿ ಬಂದು ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಸಚಿನ್, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು.
ಬಾಲಿವುಡ್ ನಟ ಅಮಿರ್ ಖಾನ್, ನಟಿ ಮಾಧುರಿ ದೀಕ್ಷಿತ್, ಗೋವಿಂದ, ಆಲಿಯಾ ಭಟ್, ಹೃತಿಕ್ ರೋಷನ್ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿ ಗಮನ ಸೆಳೆದರು.
ಇನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ, ನಿತಿನ್ ಗಡ್ಕರಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ RSS ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು. ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದಾನ ಮಾಡುವಂತೆ ಎಲ್ಲ ಗಣ್ಯರೂ ಮತದಾರರಲ್ಲಿ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.