
ಬೆಂಗಳೂರು(ಡಿ.3): 2018ರ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಇದೀಗ ಸ್ಟಾರ್'ವಾರ್ ಆರಂಭವಾಗಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್'ನಿಂದ ಕಣಕ್ಕಿಳಿಯಲು ಹಲವು ನಟ ನಟಿಯರು ಸಜ್ಜಾಗಿದ್ದಾರೆ. ತುರುವೇಕೆರೆಯಲ್ಲಿ ನಟ ಜಗ್ಗೇಶ್ ಹಾಗೂ ನಿರ್ಮಾಪಕ ಕೆ. ಮಂಜು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಬಿಜೆಪಿಯಿಂದ ಚುನಾವಣೆ ಎದುರಿಸಲು ನಟ ಜಗ್ಗೇಶ್ ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ.
ಜಗ್ಗೇಶ್ ಎದುರಾಳಿಯಾಗಿ ಕೆ.ಮಂಜು ಕಣಕ್ಕಿಳಿಯಲಿದ್ದು, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಕೂಡ ಸ್ಪಷ್ಟವಾಗಿಲ್ಲ. ಆದರೆ ಅವರು ಯಾವುದೇ ಪಕ್ಷದಿಂದಲೂ ಕೂಡ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಇತ್ತ ಮಧುಗಿರಿಯಿಂದ ನಟ ರಂಗಾಯಣ ರಘು ಅವರು ಸ್ಪರ್ಧೆ ಮಾಡಲಿದ್ದಾರೆ. ನಟಿ ಅಮೂಲ್ಯ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಿರ್ಮಾಪಕ ಮುನಿರತ್ನ ವಿರುದ್ಧ ಅಮೂಲ್ಯ ಚುನಾವಣೆ ಎದುರಿಸುವ ಸಾಧ್ಯತೆ ಇದೆ. ಇನ್ನು ಚಾಮರಾಜಪೇಟೆ ಕ್ಷೇತ್ರದಿಂದ ಲಹರಿ ವೇಲು ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು, ಜಮೀರ್ ಅಹಮದ್ ವಿರುದ್ಧ ವೇಲು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಕೆ.ಆರ್ ನಗರ ಕ್ಷೇತ್ರದಿಂದ ಮಾಳವಿಕಾ ಅವಿನಾಶ್ ಬಿಜೆಪಿಯನ್ನು ಪ್ರತಿನಿಧಿಸುವ ಸಾಧ್ಯತೆಗಳಿವೆ . ಇನ್ನು ಇತ್ತೀಚೆಗಷ್ಟೇ ತಮ್ಮದೇ ಆದ ನೂತನ ಪಕ್ಷವನ್ನು ಕಟ್ಟಿ ಅದಕ್ಕೆ ಕೆಪಿಜೆಪಿ ಎಂದು ಹೆಸರನ್ನು ಇಟ್ಟಿರುವ ನಟ ಉಪೇಂದ್ರ ಅವರೂ ಕೂಡ ಅಖಾಡಕ್ಕೆ ಇಳಿಯಲು ಸರ್ವ ಸನ್ನದ್ಧರಾಗಿದ್ದಾರೆ.
ಇಷ್ಟೇ ಅಲ್ಲದೇ ಇನ್ನೂ ಅನೇಕ ಸೆಲೆಬ್ರಿಟಿಗಳು ಉತ್ಸಾಹ ತೋರಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಸೆಲೆಬ್ರಿಟಿಗಳು ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.