ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಭಾಗ್ಯ ಸಾಧ್ಯತೆ: ರೇಸ್'ನಲ್ಲಿ ಶೋಭಾ, ಶ್ರೀರಾಮುಲು

Published : Sep 01, 2017, 11:10 PM ISTUpdated : Apr 11, 2018, 12:59 PM IST
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಭಾಗ್ಯ ಸಾಧ್ಯತೆ: ರೇಸ್'ನಲ್ಲಿ ಶೋಭಾ, ಶ್ರೀರಾಮುಲು

ಸಾರಾಂಶ

ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ಇರುವುದರಿಂದ ರಾಜ್ಯದ ಹಲವರಿಗೆ ಕೇಂದ್ರ ಸಚಿವರಾಗುವ ಅದೃಷ್ಟ ಒಲಿಯಲಿದೆ. ಜಾತಿ ಸಮೀಕರಣ ಆದ್ಯತೆ ಮೇಲೆ ರಾಜ್ಯದಿಂದ ಐವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಭಾನುವಾರ ಮುಹೂರ್ತ ಫಿಕ್ಸ್​ ಆಗಿದೆ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ಇರುವುದರಿಂದ ರಾಜ್ಯದ ಹಲವರಿಗೆ ಕೇಂದ್ರ ಸಚಿವರಾಗುವ ಅದೃಷ್ಟ ಒಲಿಯಲಿದೆ. ಜಾತಿ ಸಮೀಕರಣ ಆದ್ಯತೆ ಮೇಲೆ ರಾಜ್ಯದಿಂದ ಐವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ  ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ನಡೆದಿರುವುದರಿಂದ ಲಿಂಗಾಯತ ಕೋಟಾದಡಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ.  ಈಗಾಗಲೇ ಸಂಸದರಾದ ಸುರೇಶ್ ಅಂಗಡಿ, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ, ಶ್ರೀರಾಮುಲು, ಪಿ.ಸಿ.ಮೋಹನ್, ನಳಿನ್‌ಕುಮಾರ್ ಕಟೀಲು ಹಾಗೂ ಭಗವಂತ ಖೂಬಾ, ಪ್ರಭಾಕರ ಕೋರೆ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ.  ಸಚಿವರಾಗಿರುವ ಡಿ.ವಿ.ಸದಾನಂದ ಗೌಡರನ್ನು ಮುಂದುವರೆಸಲಾಗುವುದೋ ಅಥವಾ ರಾಜ್ಯ ರಾಜಕಾರಣಕ್ಕೆ ವಾಪಸ್ ಕಳುಹಿಸಲಾಗುವುದೋ ಎಂಬುದು ಇನ್ನೂ ಇತ್ಯರ್ಥವಾಗಿಲ್ಲ. ಜತೆಗೆ ಕೇಂದ್ರ ಸಚಿವ ಅನಂತಕುಮಾರ್​ ಖಾತೆಯಲ್ಲಿ ಕೂಡ ಬದಲಾವಣೆಯಾಗುವ ಸಂಭವವಿದೆ.

ಶ್ರೀರಾಮಲು, ಬಳ್ಳಾರಿ ಸಂಸದ

ಸುರೇಶ್ ಅಂಗಡಿ, ಬೆಳಗಾವಿ ಸಂಸದ

ಶಿವಕುಮಾರ್ ಉದಾಸಿ, ಹಾವೇರಿ ಸಂಸದ

ಪ್ರಭಾಕರ್ ಕೋರೆ, ರಾಜ್ಯಸಭಾ ಸದಸ್ಯ

ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ- ಧಾರವಾಡ ಸಂಸದ

ನಳೀನ್ ಕುಮಾರ್ ಕಟೀಲ್, ದಕ್ಷಿಣಕನ್ನಡ ಸಂಸದ

ಶೋಭಾ ಕರಂದ್ಲಾಜೆ, ಉಡುಪಿ- ಚಿಕ್ಕಮಗಳೂರು ಸಂಸದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್