
ನವದೆಹಲಿ(ಡಿ.30): ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿ ಜಾರಿಯಾದ ಬಳಿಕ ರಾಜ್ಯಗಳಿಗೆ ಆಗಿರುವ ನಷ್ಟವನ್ನು ತುಂಬಿಕೊಡುವ ನಿಟ್ಟಿನಿಂದ ಜುಲೈ- ಅಕ್ಟೋಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ 24500 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕ ಹೆಚ್ಚಿನ ಪಾಲನ್ನು ಪಡೆದುಕೊಂಡಿದೆ ಎಂದು ಸಂಸತ್ತಿಗೆ ಶುಕ್ರವಾರ ಮಾಹಿತಿ ನೀಡಲಾಗಿದೆ. ನ.೩೦ರಂದು ಬಿಡುಗಡೆ ಮಾಡಿರುವ ಜಿಎಸ್‌ಟಿ ಪರಿಹಾರದ ಪ್ರಕಾರ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ 3271 ಕೋಟಿ ರು ಪರಿಹಾರ ಲಭ್ಯವಾಗಿದೆ.
ಎರಡನೇ ಸ್ಥಾನದಲ್ಲಿರುವ ಗುಜರಾತ್ 2282 ಕೋಟಿ ರು., ಪಂಜಾಬ್ 2098 ಕೋಟಿ ರು. ಪರಿಹಾರವನ್ನು ಪಡೆದುಕೊಂಡಿದೆ. ಜಿಎಸ್‌ಟಿ ಜಾರಿ ಬಳಿಕ ಜುಲೈ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯಗಳಿಗೆ 24,500 ಕೋಟಿ ರು. ಆದಾಯ ನಷ್ಟವಾಗಿದೆ. ಈ ಹಣವನ್ನು ರಾಜ್ಯ ಸರ್ಕಾರಗಳಿಗೆ ಪರಿಹಾರ ರೂಪದಲ್ಲಿ ನೀಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಶಿವ್ ಪ್ರತಾಪ್ ಶುಕ್ಲಾ ಲೋಕಸಭೆಗೆ ಲಿಖಿತ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.