ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್?

Published : Oct 15, 2018, 11:39 AM IST
ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್?

ಸಾರಾಂಶ

ದೇಶದಲ್ಲಿ ಇನ್ನೇನು ಹಬ್ಬಗಳು ಸಾಲು ಸಾಲಾಗಿ ಶುರುವಾಗುತ್ತಿವೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರಿಗೆ ಭರ್ಜರಿ ವೇತನ ಏರಿಕೆ ಮಾಡುವ ಸಾಧ್ಯತೆ ಇದೆ. 

ನವದೆಹಲಿ : ಇನ್ನೇನು ಹಬ್ಬಗಳು ಸಾಲು ಸಾಲಾಗಿ ಆಗಮಿಸುತ್ತಿದ್ದು ಇದೇ ವೇಳೆ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಲಭ್ಯವಾಗುತ್ತಿದೆ. 7ನೇ ವೇತನ ಆಯೋಗದ ಅನ್ವಯದಂತೆ ಕೇಂದ್ರ ಸರ್ಕಾರದ 50 ಲಕ್ಷ ನೌಕರರಿಗೆ ದೀಪಾವಳಿ ಕೊಡುಗೆಯಾಗಿ ವೇತನ ಏರಿಕೆ ಜಾರಿಯಾಗುವ ಸಾಧ್ಯತೆ ಇದೆ. 

ಈ ಬಗ್ಗೆ ಕೇಂದ್ರ ಸರ್ಕಾರಿ ನೌಕರರು ಸರ್ಕಾರಕ್ಕೆ  7ನೇ ವೇತನದ ಆಯೋದಗದ ಅನ್ವಯ ಸಂಬಳ ಏರಿಕೆ ಮಾಡಲು ಮನವಿ ಸಲ್ಲಿಸಿದ್ದಾರೆ. 

ಹಣಕಾಸು ಖಾತೆ ರಾಜ್ಯ ಸಚಿವ ಪಿ. ರಾಧಾಕೃಷ್ಣನ್ ಅವರು ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರು.   7ನೇ ವೇತನ ಆಯೋಗದ ಅನ್ವಯದಂತೆ ಕೇಂದ್ರ ಸರ್ಕಾರ ನೌಕರರಿಗೆ ಮಿನಿಮಮ್ ಮೂಲ ವೇತನದ ಏರಿಕೆ ಮಾಡುವ ಬಗ್ಗೆ  ಹೇಳಿದ್ದರು. 

 ಮೂಲ ವೇತನದಲ್ಲಿ ಏರಿಕೆ ಮಾಡಿದಲ್ಲಿ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ದೀಪಾವಳಿ ಕೊಡುಗೆಯಾಗಿ ಇದರ ಲಾಭ ಪಡೆದುಕೊಳ್ಳಲಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?