
ನವದೆಹಲಿ(ಜೂ.13): ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ತಾನೂ ಮಾಡುವುದಾಗಿ ಕರ್ನಾಟಕ ಸರ್ಕಾರ ನಿರಂತರವಾಗಿ ಹೇಳಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಎಲ್ಲ ರೈತರ ಸಾಲ ಮನ್ನಾ ಮಾಡುವ ಕುರಿತು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜೇಟ್ಲಿ, ಕೇಂದ್ರ ಸರ್ಕಾರದ ಬೊಕ್ಕಸದಿಂದ ರೈತರ ಕೃಷಿ ಸಾಲ ಮನ್ನಾಕ್ಕೆ ಹಣ ಕೊಡುವುದಿಲ್ಲ. ಸಾಲ ಮನ್ನಾದಂತಹ ಯೋಜನೆ ಘೋಷಿಸುವ ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲದಿಂದ ಹಣ ಹೊಂದಿಸಬೇಕು ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಇದರಿಂದಾಚೆಗೆ ಕೇಂದ್ರ ಸರ್ಕಾರ ಹೇಳುವುದಕ್ಕೆ ಏನೂ ಉಳಿದಿಲ್ಲ ಎಂದು ತಿಳಿಸಿದರು.
ಉತ್ತರಪ್ರದೇಶ ಹಾಗೂ ಮಹಾರಾಷ್ಟ್ರದ ಬಿಜೆಪಿ ಸರ್ಕಾರಗಳು ಸಾಲ ಮನ್ನಾ ನಿರ್ಧಾರ ಘೋಷಣೆ ಮಾಡಿವೆ. ಮಧ್ಯಪ್ರದೇಶದಲ್ಲಿ ಸಾಲ ಮನ್ನಾಕ್ಕಾಗಿ ರೈತರು ಹಿಂಸಾರೂಪದ ಹೋರಾಟವನ್ನೇ ನಡೆಸಿದ್ದಾರೆ. ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಿದರೆ ಹಣಕಾಸು ಪರಿಸ್ಥಿತಿ ಕೈಮೀರಿ ಹೋಗಲಿದೆ. ಹಣದುಬ್ಬರ ಹೆಚ್ಚಳಕ್ಕೂ ಕಾರಣವಾಗಲಿದೆ ಎಂದು ಕಳೆದ ವಾರ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಣೆ ವೇಳೆ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.