ಕೇಂದ್ರ ಸರ್ಕಾರ ಭಯಾನಕ ರೋಗಿ: ಚಿದಂಬರಂ

By Suvarna Web DeskFirst Published Feb 11, 2018, 10:32 AM IST
Highlights

ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆ ‘ಭಯಾನಕ ವೈದ್ಯರ’ ಕೈಯ್ಯಲ್ಲಿತ್ತು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಹಣಕಾಸು ಚಿದಂಬರಂ, ಬಿಜೆಪಿ ನೇತೃತ್ವದ ಸರ್ಕಾರ ಭಯಾನಕ ರೋಗಿ, ವೈದ್ಯರು ಹೇಳಿದ್ದನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕೊಚ್ಚಿ: ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆ ‘ಭಯಾನಕ ವೈದ್ಯರ’ ಕೈಯ್ಯಲ್ಲಿತ್ತು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಹಣಕಾಸು ಚಿದಂಬರಂ, ಬಿಜೆಪಿ ನೇತೃತ್ವದ ಸರ್ಕಾರ ಭಯಾನಕ ರೋಗಿ, ವೈದ್ಯರು ಹೇಳಿದ್ದನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 ಇದೇ ವೇಳೆ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ ರಕ್ತ ಹೀರುವ ಹಂಚಿಕೆ ಎಂದು ಟೀಕಿಸಿರುವ ಚಿದಂಬರಂ, ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಹೊಸ ಸರ್ಕಾರವೇ ಉತ್ತರ ಎಂದು ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಯಾವುದೇ ವೃದ್ಧಿಯಾಗಿಲ್ಲ. ಪ್ರಮುಖ ಸಮಸ್ಯೆಗಳಿಗೆ ಪರಿಹಾರವನ್ನೇ ಸೂಚಿಸಿಲ್ಲ. ಕೇವಲ ದೊಡ್ಡ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಟೀಕಿಸಿದ್ದಾರೆ.

click me!