
ನವದೆಹಲಿ (ಮೇ.16): ಸಚಿವ ಸಂಪುಟಕ್ಕೆ ಇಬ್ಬರು ಸಚಿವರ ನೇಮಕಾತಿ ಮಾಡುವುದಕ್ಕೆ ಸಂಬಂಧಿಸಿದ ಫೈಲನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದ್ದು ದೆಹಲಿ ಸರ್ಕಾರದ ಕಾರ್ಯ ಕಲಾಪಗಳು ನಿಧಾನಗತಿಯಲ್ಲಿ ಸಾಗುತ್ತಿವೆಯೆಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೆಹಲಿ ಜನತೆ ನರಳುವುದು ಬೇಡ. ಕಳೆದ 10 ದಿನಗಳಿಂದ ಫೈಲನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿದೆ. ಇದರಿಂದಾಗಿ ಸಾಕಷ್ಟು ಕೆಲಸಗಳು ಹಾಗೆಯೇ ಉಳಿದಿವೆ. ನಿಮಗೆ ದ್ವೇಷವಿರುವುದು ನಮ್ಮ ಮೇಲೆ. ದೆಹಲಿ ಜನತೆ ಮೇಲೆ ಅದನ್ನು ಸಾಧಿಸಬೇಡಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಗೌತಮ್ ಹಾಗೂ ಗೆಹ್ಲಾಟ್ ನೇಮಕಾತಿ ಸಂಬಂಧಿಸಿದ ಫೈಲನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದೆ. ಎಂದು ಸರ್ಕಾರದ ಉನ್ನತಾಧಿಕಾರಿಗಳು ಹೇಳಿದ್ದಾರೆ. ಗೃಹ ಇಲಾಖೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.